ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ವರ್ಷಕ್ಕೆ ತರಿಸಿದ್ದ ₹80 ಲಕ್ಷದ ಡ್ರಗ್ಸ್‌ ಜಪ್ತಿ

ನೈಜೀರಿಯಾದ ಮೂವರು ಆರೋಪಿಗಳ ಬಂಧನ
Last Updated 29 ಡಿಸೆಂಬರ್ 2021, 19:59 IST
ಅಕ್ಷರ ಗಾತ್ರ

ಬೆಂಗಳೂರು: ಹೊಸ ವರ್ಷಾಚರಣೆ ಸಂದರ್ಭದಲ್ಲಿ ನಡೆಯುವ ಪಾರ್ಟಿಗಳಿಗೆ ಸರಬರಾಜು ಮಾಡಲು ಮಾದಕ ವಸ್ತುಗಳನ್ನು ಸಂಗ್ರಹಿಸಿ ಇಟ್ಟಿದ್ದ ಮನೆಯೊಂದರ ಮೇಲೆಬಾಗಲೂರು ಪೊಲೀಸರು ದಾಳಿ ನಡೆಸಿದ್ದು, ನೈಜೀರಿಯಾದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳ ಮನೆಯಲ್ಲಿ ಸಿಕ್ಕ ₹80 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

‘ಆರೋಪಿಗಳು ಬ್ಯುಸಿನೆಸ್‌ ವೀಸಾ ಪಡೆದು ಭಾರತಕ್ಕೆ ಬಂದಿದ್ದರು. ಮುಂಬೈನಿಂದ ಮಾದಕ ವಸ್ತುಗಳನ್ನು ಖರೀದಿಸುತ್ತಿದ್ದರು. ಯಾರಿಗೂ ಅನುಮಾನ ಬರದಂತೆ ಸೋಪ್‌ ಬಾಕ್ಸ್‌ಗಳಲ್ಲಿ ಮಾದಕ ವಸ್ತುಗಳನ್ನು ತಂದು ಬೆಂಗಳೂರಿನಲ್ಲಿ ಮಾರುತ್ತಿದ್ದರು. ಇದನ್ನೇ ವೃತ್ತಿಯಾಗಿ ಮಾಡಿಕೊಂಡು ಹಣ ಸಂಪಾದಿಸುತ್ತಿದ್ದರು’ ಎಂದು ಪೊಲೀಸರು ತಿಳಿಸಿದರು.

‘ಖಚಿತ ಮಾಹಿತಿ ಮೇರೆಗೆ ಆರೋಪಿಗಳ ಮನೆಯ ಮೇಲೆ ಬುಧವಾರ ದಾಳಿ ನಡೆಸಲಾಯಿತು. ಈ ವೇಳೆ ಮನೆಯಲ್ಲಿ ಪತ್ತೆಯಾದ 400 ಗ್ರಾಂ ಎಂಡಿಎಂಎ, 40 ಗ್ರಾಂ ಕೊಕೇನ್, 40 ಗ್ರಾಂ ಹ್ಯಾಶಿಶ್, ಡ್ರಗ್ಸ್‌ ತುಂಬಿಸಿದ್ದ ಐದು ಸೋ‍ಪ್ ಬಾಕ್ಸ್‌ಗಳು, ತೂಕದ ಯಂತ್ರ ಹಾಗೂ ಐದು ಮೊಬೈಲ್‌ಗಳನ್ನು ಜಪ್ತಿ ಮಾಡಲಾಯಿತು’ ಎಂದು ಮಾಹಿತಿ ನೀಡಿದರು.

‘ಆರೋಪಿಗಳು ಹೊಸ ವರ್ಷದ ಪಾರ್ಟಿಗಳಿಗೆ ಪೂರೈಸಲು ಮಾದಕ ವಸ್ತುಗಳನ್ನು ತರಿಸಿಕೊಂಡಿದ್ದರು. ಅವರ ವಿರುದ್ಧ ಎನ್‌ಡಿಪಿಎಸ್‌ ಕಾಯ್ದೆ ಹಾಗೂ ವಿದೇಶಿಯರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT