ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹89.92 ಲಕ್ಷ ಮೌಲ್ಯದ ಡ್ರಗ್ಸ್‌ ವಶ

Last Updated 3 ಮೇ 2022, 20:04 IST
ಅಕ್ಷರ ಗಾತ್ರ

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಆಸ್ಟ್ರೇಲಿಯಾಗೆ ₹89.92 ಲಕ್ಷ ಮೌಲ್ಯದ 4.496 ಕೆ.ಜಿ ಎಫೆಡ್ರಿನ್‌ ಡ್ರಗ್ಸ್‌ ರಫ್ತು ಮಾಡುತ್ತಿದ್ದ ಕೊರಿಯರ್‌ ಪೊಟ್ಟಣವನ್ನು ವಿಮಾನ ನಿಲ್ದಾಣ ಕಸ್ಟಮ್ಸ್‌ ಅಧಿಕಾರಿಗಳು ಕಳೆದ ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ವಿಮಾನ ನಿಲ್ದಾಣದಿಂದ ಆಸ್ಪ್ರೇಲಿಯಾಗೆ ಎಫೆಡ್ರಿನ್‌ ಡ್ರಗ್ಸ್‌ ರಫ್ತು ಮಾಡಲು ಯತ್ನಿಸಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಬೆಂಗಳೂರು ಕಸ್ಟಮ್‌ ಅಧಿಕಾರಿಗಳ ತಂಡ ಯಶಸ್ವಿಯಾಗಿದೆ. ಅವರನ್ನು ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT