ಬೆಂಗಳೂರು: ನಗರ ಸಂಚಾರ ವಿಭಾಗದ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದು, ಮದ್ಯ ಸೇವಿಸಿ ವಾಹನ ಚಾಲನೆ ಹಾಗೂ ಅತಿ ವೇಗದ ಚಾಲನೆ ಮಾಡಿದ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ನಗರದ 50 ಸಂಚಾರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಒಂದು ವಾರದಲ್ಲಿ 95,179 ವಾಹನ ಚಾಲಕರನ್ನು ತಪಾಸಣೆಗೊಳಪಡಿಸಲಾಗಿದ್ದು, ಆ ಪೈಕಿ ಪಾನಮತ್ತರಾಗಿದ್ದ 1,187 ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

165 ವಾಹನ ಚಾಲಕರ ವಿರುದ್ಧ ಅತಿ ವೇಗದ ಚಾಲನೆಯ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಅವರಿಂದ ₹ 1.65 ಲಕ್ಷ ದಂಡ ಸಂಗ್ರಹಿಸಲಾಗಿದೆ.

ವರ್ಷಾಚರಣೆಯಲ್ಲಿ ಮದ್ಯ, ಮಾದಕ ದ್ರವ್ಯ ಸೇವನೆ ಮಾಡಿ ವಾಹನ ಚಾಲನೆ ಮಾಡುವವರ ಪತ್ತೆಗೆ ನಗರದ ವಿವಿಧ ಸ್ಥಳಗಳಲ್ಲಿ ಪರಿಶೀಲನೆಗೆ ‘ಚೆಕ್ ಪಾಯಿಂಟ್’ಗಳನ್ನು ನಿರ್ಮಿಸಲಾಗಿದೆ.

ಅತಿ ವೇಗ ಮತ್ತು ಅಜಾಗರೂಕತೆಯಿಂದ ವಾಹನ ಚಾಲನೆ ಮಾಡುವ ಹಾಗೂ ವ್ಹೀಲಿ, ಡ್ರ್ಯಾಗ್ ರೇಸ್ನಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಂಚಾರ ಪೊಲೀಸ್ ವಿಭಾಗದ ಜಂಟಿ ಕಮಿಷನರ್ ಎಂ. ಎನ್. ಅನುಚೇತ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.