ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ಮದ್ಯ ಕುಡಿದು ಚಾಲನೆ: 386 ಚಾಲಕರ ವಿರುದ್ಧ ಪ್ರಕರಣ

Published 25 ಮೇ 2024, 14:39 IST
Last Updated 25 ಮೇ 2024, 14:39 IST
ಅಕ್ಷರ ಗಾತ್ರ

ಬೆಂಗಳೂರು: ಮದ್ಯ ಕುಡಿದು ವಾಹನ ಚಲಾಯಿಸುವವರ ಪತ್ತೆಗೆ ನಗರದ ಸಂಚಾರ ಪೊಲೀಸರು ಶನಿವಾರ ರಾತ್ರಿ ವಿಶೇಷ ಕಾರ್ಯಾಚರಣೆ ನಡೆಸಿದ್ದು, 386 ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

‘17,361 ವಾಹನಗಳನ್ನು ತಡೆದು ಸವಾರರು, ಚಾಲಕರನ್ನು ಪರಿಶೀಲಿಸಲಾಯಿತು. ‘ಮದ್ಯ ಕುಡಿದು ವಾಹನ ಚಾಲನೆಯಿಂದ ಅಪಘಾತಗಳು ಸಂಭವಿಸುತ್ತಿವೆ. ಇದನ್ನು ತಡೆಯಲು ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದರು.

‘ಶನಿವಾರ ಮದ್ಯ ಕುಡಿದು ವಾಹನ ಚಲಾಯಿಸಿ ಸಿಕ್ಕಿಬಿದ್ದಿರುವ ಚಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವಾಹನಗಳನ್ನು ಜಪ್ತಿ ಮಾಡಲಾಗಿದೆ. ಕೋರ್ಟ್‌ನಲ್ಲಿ ದಂಡ ಪಾವತಿಸಿದ ಬಳಿಕ ವಾಹನ ಬಿಡುಗಡೆಗೆ ಕ್ರಮವಹಿಸಲಾಗುವುದು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT