ಬೆಳಿಗ್ಗೆ 7.30ರಿಂದ ಮಧ್ಯಾಹ್ನ 12ರ ವರೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಯಿತು. ಒಟ್ಟು 3,924 ವಾಹನಗಳ ತಪಾಸಣೆ ಮಾಡಲಾಯಿತು. ಮದ್ಯ ಸೇವಿಸಿ, ವಾಹನ ಚಾಲನೆ ಮಾಡಿದ್ದ 21 ಚಾಲಕರು ಹಾಗೂ ಹೆಚ್ಚುವರಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ 445 ಚಾಲಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು.