ಬೆಂಗಳೂರು: ‘ಮೆಟ್ರೊ ನಿಲ್ದಾಣದೊಳಗೆ ಹೋಗಲು ಬಿಡಲಿಲ್ಲ’ ಎಂಬ ಕಾರಣಕ್ಕೆ ಪಾನಮತ್ತ ಪ್ರಯಾಣಿಕರೊಬ್ಬರು ಭದ್ರತಾ ಸಿಬ್ಬಂದಿಯ ಕಪಾಳಕ್ಕೆ ಹೊಡೆದು ಹಲ್ಲೆ ಮಾಡಿದ್ದು, ಈ ಸಂಬಂಧ ಬಾಗಲಗುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಡಿ.16ರಂದು ರಾತ್ರಿ ನಡೆದಿರುವ ಘಟನೆ ಬಗ್ಗೆ ಮೆಟ್ರೊ ಭದ್ರತಾ ಸಿಬ್ಬಂದಿ ದೂರು ನೀಡಿದ್ದಾರೆ. ಪ್ರಯಾಣಿಕ ಚಂದ್ರಶೇಖರ್ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಮದ್ಯ ಕುಡಿದಿದ್ದ ಚಂದ್ರಶೇಖರ್, ಮೆಜೆಸ್ಟಿಕ್ಗೆ ರೈಲಿನಲ್ಲಿ ಹೋಗಲು ದಾಸರಹಳ್ಳಿ ಮೆಟ್ರೊ ನಿಲ್ದಾಣಕ್ಕೆ ಬಂದಿದ್ದರು. ನಿಲ್ದಾಣದ ಪ್ರವೇಶ ದ್ವಾರದಲ್ಲಿ ಅವರನ್ನು ತಡೆದಿದ್ದ ಸಿಬ್ಬಂದಿ, ‘ಮದ್ಯಪಾನ ಮಾಡಿದವರು ರೈಲಿನಲ್ಲಿ ಪ್ರಯಾಣಿಸಲು ಅವಕಾಶವಿಲ್ಲ. ನಿಲ್ದಾಣದೊಳಗೆ ಬಿಡಲು ಸಾಧ್ಯವಿಲ್ಲ’ ಎಂದಿದ್ದರು. ಇದೇ ವಿಚಾರವಾಗಿ ಮಾತಿನ ಚಕಮಕಿ ನಡೆದಿತ್ತು.’

‘ಆರೋಪಿ ಚಂದ್ರಶೇಖರ್, ‘ನಾನು ರಕ್ಷಣಾ ವೇದಿಕೆಯವನು. ನನ್ನನ್ನು ತಡೆಯುವವರು ಯಾರು?’ ಎಂದಿದ್ದರು. ಭದ್ರತಾ ಸಿಬ್ಬಂದಿಯ ಕಪಾಳಕ್ಕೆ ಹೊಡೆದು, ಹಲ್ಲೆ ಮಾಡಿದ್ದರು. ಸ್ಥಳದಲ್ಲಿದ್ದವರು ಜಗಳ ಬಿಡಿಸಿದ್ದರು. ಇದಾದ ನಂತರ ಭದ್ರತಾ ಸಿಬ್ಬಂದಿ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಚಂದ್ರಶೇಖರ್, ಸಾರ್ವಜನಿಕ ಕರ್ತವ್ಯಕ್ಕೆ ಅಡ್ಡಿಪಡಿಸಿರುವುದಾಗಿ ದೂರಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.