ಬೆಂಗಳೂರು: ಅಮೃತಹಳ್ಳಿ ಬಳಿಯ ವೀರಣ್ಣನಪಾಳ್ಯದಲ್ಲಿ ಸೋಮವಾರ ರಾತ್ರಿ ಪಾನಮತ್ತ ಕಾರ್ಮಿಕರ ನಡುವೆ ನಡೆದ ಜಗಳವು ಕೊಲೆಯಲ್ಲಿ ಅಂತ್ಯವಾಗಿದೆ.

ರಾಜು (37) ಅವರನ್ನು ಕೊಲೆ ಮಾಡಿದ ಆರೋಪದ ಅಡಿ ಆರೋಪಿ ರಘು ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಜಾರ್ಖಂಡ್ ಮೂಲದ ರಾಜು ಮತ್ತು ರಘು, ವೀರಣ್ಣನಪಾಳ್ಯದ ನಿರ್ಮಾಣ ಹಂತದ ಕಟ್ಟಡದಲ್ಲಿ ಗ್ರಾನೈಟ್ ಹಾಕುವ ಕೆಲಸ ಮಾಡುತ್ತಿದ್ದರು. ಅವರಿಬ್ಬರೂ ಆ ಕಟ್ಟಡದ ಪಕ್ಕದ ತಾತ್ಕಾಲಿಕ ಶೆಡ್ನಲ್ಲಿ ವಾಸವಾಗಿದ್ದರು. ಸೋಮವಾರ ರಾತ್ರಿ ಇಬ್ಬರ ನಡುವೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಪೊಲೀಸರು ಹೇಳಿದರು.

‘ಆರೋಪಿ ರಘು, ಮೃತ ರಾಜು ಅವರ ಪತ್ನಿಗೆ ಆಗಾಗ್ಗೆ ಕರೆ ಮಾಡಿ ಮಾತನಾಡುತ್ತಿದ್ದ. ಈ ವಿಚಾರಕ್ಕೆ ರಾಜು ಮತ್ತು ರಘು ನಡುವೆ ಜಗಳವಾಗಿದೆ. ಬಳಿಕ ಜಗಳ ವಿಕೋಪಕ್ಕೆ ತಿರುಗಿ ರಘು, ಚಾಕುವಿನಿಂದ ರಾಜು ಅವರ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ’ ಎಂದು ಪೊಲೀಸರು ಹೇಳಿದರು.

ಕೊಲೆ ಬಳಿಕ ಆರೋಪಿ ಜಾರ್ಖಂಡ್ಗೆ ಪರಾರಿಯಾಗಲು ರೈಲು ನಿಲ್ದಾಣಕ್ಕೆ ಹೋಗಿದ್ದ. ಈ ಬಗ್ಗೆ ಮಾಹಿತಿ ತಿಳಿದ ಪೊಲೀಸರು ರೈಲು ನಿಲ್ದಾಣಕ್ಕೆ ತೆರಳಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಪೊಲೀಸರು ಹೇಳಿದರು.

ಅಮೃತಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.