ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಎಸ್ ಮ್ಯಾಕ್ಸ್ ಸಾಹಿತ್ಯ ಶ್ರೀ ಪ್ರಶಸ್ತಿ

Last Updated 2 ನವೆಂಬರ್ 2019, 6:55 IST
ಅಕ್ಷರ ಗಾತ್ರ

ಕೆ.ಆರ್.ಪುರ: ಕನ್ನಡ ಭಾಷೆ ಔಪಚಾರಿಕವಾದ ಭಾಷೆಯಾಗದೆ ವ್ಯಾವಹಾರಿಕ ಭಾಷೆಯಾಗಬೇಕು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಬಿ.ವಿ.ವಸಂತಕುಮಾರ್ ತಿಳಿಸಿದರು.

ರಾಜ್ಯೋತ್ಸವದ ಅಂಗವಾಗಿ ನಾಗವಾರದ ಡಿಎಸ್ ಮ್ಯಾಕ್ಸ್ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಡಿಎಸ್ ಮ್ಯಾಕ್ಸ್ ಸಾಹಿತ್ಯಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿ, ‘ನಾವು ಜಾಗತೀಕರಣದ ಸಂದರ್ಭದಲ್ಲಿದ್ದೇವೆ. ಖಾಸಗಿ ಕಂಪನಿಗಳು ಕೂಡ ಕನ್ನಡ ಕೆಲಸಗಳನ್ನು ಮಾಡುತ್ತಿವೆ’ ಎಂದರು.

ಡಿಎಸ್ ಮ್ಯಾಕ್ಸ್ ಸಾಹಿತ್ಯ ಶ್ರೀ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸಾಹಿತಿ ಶಾ.ಮಂ.ಕೃಷ್ಣರಾಯ, ‘ಕನ್ನಡ ಮನಸುಗಳನ್ನು ಒಟ್ಟುಗೂಡಿಸುವ ಕೆಲಸ ಮಹತ್ವದ್ದು. ಕನ್ನಡ ನಾಡಿನಲ್ಲಿ ಬೇರೆ ಭಾಷೆಯವರು ಇದ್ದಾರೆ. ಅವರು ಕೂಡ ಕನ್ನಡವನ್ನು ಬೆಳೆಸುವ ಕೆಲಸ ಮಾಡುತ್ತಿದ್ದಾರೆ. ಕನ್ನಡದ ಬಗ್ಗೆ ವಿದೇಶಿಯರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುತ್ತಿದ್ದೇವೆ’ ಎಂದರು. ಏಳು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT