ವಿದ್ಯಾರ್ಥಿಗಳ ಪ್ರವೇಶಕ್ಕೆ ತೊಂದರೆ ಆಗಬಾರದು
ಬೆಂಗಳೂರು: 10ನೇ ತರಗತಿಯಿಂದ 11ನೇ ತರಗತಿಗೆ ಮತ್ತು 12ನೇ ತರಗತಿಯಿಂದ ಪದವಿಗೆ ಪ್ರವೇಶ ಪಡೆಯಲು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ.
ಸಿಬಿಎಸ್‌ಇ, ಐಸಿಎಸ್‌ಇ ಪಠ್ಯಕ್ರಮಕ್ಕೂ ರಾಜ್ಯ ಪಠ್ಯಕ್ರಮಕ್ಕೂ ಅಜಗಜಾಂತರ ಇದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಪೈಪೋಟಿ ನೀಡುವುದು ಕಷ್ಟವಾಗಿದೆ. ಆತಂಕಗಳ ನಡುವೆ ಪರೀಕ್ಷೆ ಬರೆಯಲು ಒತ್ತಡ ಹೇರುವುದು ಸರಿಯಲ್ಲ ಎಂದು ಸಮಿತಿಯ ರಾಜ್ಯ ಸಂಚಾಲಕ ಲಕ್ಷ್ಮೀನಾರಾಯಣ ನಾಗವಾರ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.