ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ

Last Updated 11 ಜುಲೈ 2020, 8:24 IST
ಅಕ್ಷರ ಗಾತ್ರ

ಬೆಂಗಳೂರು: ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ಒಕ್ಕೂಟದ ಸದಸ್ಯರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಮೈಸೂರು ಬ್ಯಾಂಕ್ ವೃತ್ತದಲ್ಲಿ ಸೇರಿದ್ದ ಪ್ರತಿಭಟನಕಾರರು, ‘ಕಾಯ್ದೆ ತಿದ್ದುಪಡಿ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೂಡಲೇ ಕೈ ಬಿಡಬೇಕು’ ಎಂದು ಆಗ್ರಹಿಸಿದರು.

ಒಕ್ಕೂಟ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್, ‘ದೇವರಾಜ್ ಅರಸು ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಕಾಯ್ದೆಯನ್ನು ತಿದ್ದುಪಡಿ ಮಾಡಿ ಉಳುವವನೇ ಭೂ ಒಡೆಯ ಎಂದು ಘೋಷಿಸಿದ್ದರು. ಕೃಷಿ ಹಾಗೂ ರೈತರ ಪರವಾಗಿರುವ ಕಾಯ್ದೆಯನ್ನು ತಿದ್ದುಪಡಿ ಮಾಡುತ್ತಿರುವ ಬಿಜೆಪಿ ಸರ್ಕಾರ, ಬಂಡವಾಳಶಾಹಿಗಳು ಹಾಗೂ ಕಾರ್ಪೊರೇಟ್ ಕಂಪನಿಗಳಿಗೆ ಕೃಷಿ ಭೂಮಿ ನೀಡಲು ಹೊರಟಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಒಕ್ಕೂಟದ ರಾಜ್ಯ ಸಂಚಾಲಕ ಲಕ್ಷ್ಮಿನಾರಾಯಣ ನಾಗವಾರ, ‘ಕೃಷಿ ಭೂಮಿಯನ್ನು ಅನ್ಯ ಉದ್ದೇಶಕ್ಕೆ ಬಳಸಬಾರದು. ಕಾಯ್ದೆ ತಿದ್ದುಪಡಿ ಮಾಡಿದರೆ ರೈತರು ಭೂಮಿ ಕಳೆದುಕೊಳ್ಳಲಿದ್ದಾರೆ’ ಎಂದು ಆತಂಕ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಬೆಂಗಳೂರು ವಿಭಾಗೀಯ ಸಂಚಾಲಕ ಮಂಜುನಾಥ್ ಅಣ್ಣಯ್ಯ, ಬೆನ್ನಿಗಾನಹಳ್ಳಿ ರಾಮಚಂದ್ರ, ಗೊಲ್ಲಹಳ್ಳಿ ಶಿವಪ್ರಸಾದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT