ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನಸಂಖ್ಯೆಗೆ ತಕ್ಕಂತೆ ಅನುದಾನ ನಿಗದಿಪಡಿಸಿ: ದಲಿತ ಸಂಘರ್ಷ ಸಮಿತಿ

ದಲಿತ ಸಂಘರ್ಷ ಸಮಿತಿ ಒಕ್ಕೂಟದಿಂದ ಪ್ರತಿಭಟನೆ
Last Updated 3 ಮಾರ್ಚ್ 2022, 21:05 IST
ಅಕ್ಷರ ಗಾತ್ರ

ಬೆಂಗಳೂರು: 'ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ (ಎಸ್‌.ಸಿ, ಎಸ್‌.ಟಿ) ಜನಸಂಖ್ಯೆಗೆ ಅನುಗುಣವಾಗಿ 2022–23ನೇ ಸಾಲಿನ ಬಜೆಟ್‌ನಲ್ಲಿ ಅನುದಾನ ನಿಗದಿಪಡಿಸಬೇಕು’ ಎಂದು ಒತ್ತಾಯಿಸಿ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.

ದಲಿತ ಸಂಘರ್ಷ ಸಮಿತಿ ಒಕ್ಕೂಟದಿಂದ ’ಹಕ್ಕೊತ್ತಾಯ ಧರಣಿ’ ಹಮ್ಮಿಕೊಳ್ಳಲಾಗಿತ್ತು. ಆನಂದರಾವ್ ವೃತ್ತದ ಗಾಂಧಿ ಪ್ರತಿಮೆ ಎದುರು ಸೇರಿದ್ದ ಪ್ರತಿಭಟನಕಾರರು, ನೀಲಿ ಶಾಲು ಧರಿಸಿ ಘೋಷಣಾ ಫಲಕಗಳನ್ನು ಪ್ರದರ್ಶಿಸಿದರು.

‘ಬಾಕಿ ಇರುವ ಎಲ್ಲ ಹಂತದ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು. ದಲಿತ ವಿದ್ಯಾರ್ಥಿಗಳ ಆದಾಯ ಮಿತಿ ಸದ್ಯ ₹ 2.50 ಲಕ್ಷವಿದ್ದು, ಇದನ್ನು ₹ 10 ಲಕ್ಷಕ್ಕೆ ಏರಿಕೆ ಮಾಡಬೇಕು’ ಎಂದೂ ಆಗ್ರಹಿಸಿದರು.

‘ದಲಿತ ಸಮುದಾಯದ ಅಭಿವೃದ್ಧಿಗಾಗಿ ವಿವಿಧ ಇಲಾಖೆಯಲ್ಲಿ ಮೀಸಲಿಟ್ಟ ಹಣವನ್ನೆಲ್ಲ ಸಮಾಜ ಕಲ್ಯಾಣ ಇಲಾಖೆಗೆ ವರ್ಗಾಯಿಸಬೇಕು. ಏಕ ಗವಾಕ್ಷಿ ವ್ಯವಸ್ಥೆ ಮೂಲಕ ಅಂಥ ಹಣವನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕು. ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಸಮರ್ಪಕವಾಗಿ ಖರ್ಚು ಮಾಡದ ಅಧಿಕಾರಿಗಳ ವಿರುದ್ಧ ದೂರು ದಾಖಲಿಸುವ ಸಂಬಂಧ ‘ದೂರು ಸಲ್ಲಿಕೆ ಪ್ರಾಧಿಕಾರ’ ರಚಿಸಬೇಕು. ದಲಿತ ಸಂಘಟನೆಗಳ ಕನಿಷ್ಠ ಇಬ್ಬರು ಮುಖಂಡರನ್ನು ಸದಸ್ಯರನ್ನಾಗಿ ಮಾಡಬೇಕು’ ಎಂದೂ ಒತ್ತಾಯಿಸಿದರು.

‘ಅನುಸೂಚಿತ ಜಾತಿಗಳ ಉಪ ಯೋಜನೆ (ಎಸ್‌ಸಿಪಿ) ಮತ್ತು ಬುಡಕಟ್ಟು ಉಪಯೋಜನೆ (ಟಿಎಸ್‌ಪಿ) ಕಾಯ್ದೆ– 2013ರಲ್ಲಿರುವ ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನವನ್ನು ಅನ್ಯ ಉದ್ದೇಶಕ್ಕೆ ಬಳಸಲು ಅವಕಾಶ ಕಲ್ಪಿಸುವ 7 (ಡಿ) ನಿಯಮ ತೆಗೆದು ಹಾಕಬೇಕು’ ಎಂದೂ ಪ್ರತಿಭಟನಕಾರರು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT