ಸೋಮವಾರ, ಜೂನ್ 14, 2021
26 °C

ವಿಚಾರಣೆಗೆ ಹಾಜರಾದ ದುನಿಯಾ ವಿಜಯ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜಿಮ್ ತರಬೇತುದಾರ ಮಾರುತಿ ಗೌಡ ಅವರನ್ನು ಅಪಹರಿಸಿ ಹಲ್ಲೆ ಮಾಡಿದ ಆರೋಪದಡಿ ಜೈಲು ಸೇರಿ ಜಾಮೀನು ಮೇಲೆ ಬಿಡುಗಡೆಗೊಂಡಿರುವ ದುನಿಯಾ ವಿಜಯ್ ಹಾಗೂ ಅವರ ಸಹಚರರು, 8ನೇ ಎಸಿಎಂಎಂ ನ್ಯಾಯಾಲಯದ ವಿಚಾರಣೆಗೆ ಶನಿವಾರ ಹಾಜರಾದರು.

ಜಾಮೀನಿಗೆ ವಿಧಿಸಿದ್ದ ಷರತ್ತಿನನ್ವಯ ವಿಚಾರಣೆಗೆ ಹಾಜರಾದ ಆರೋಪಿಗಳು, ‘ದೋಷಾರೋಪ ಪಟ್ಟಿ ಸಲ್ಲಿಕೆಯಾಗುವವರೆಗೂ ಕಲಾಪದ ಹಾಜರಾತಿಗೆ ವಿನಾಯಿತಿ ನೀಡಬೇಕು’ ಎಂದು ಕೋರಿದರು. ಅವರ ಮನವಿ ತಿರಸ್ಕರಿಸಿದ ನ್ಯಾಯಾಲಯ, ಪ್ರಕರಣದ ವಿಚಾರಣೆಯನ್ನು ಡಿಸೆಂಬರ್ 12ಕ್ಕೆ ಮುಂದೂಡಿತು.

ವಸಂತನಗರದಲ್ಲಿ ಸೆಪ್ಟೆಂಬರ್ 22ರಂದು ರಾತ್ರಿ ಆಯೋಜಿಸಿದ್ದ ‘ಮಿಸ್ಟರ್ ಬೆಂಗಳೂರು’ ಸ್ಪರ್ಧೆ ವೇಳೆ ಗಲಾಟೆ ನಡೆದಿತ್ತು. ವಿಜಯ್‌ ಹಾಗೂ ಸಹಚರರು, ಮಾರುತಿ ಗೌಡರನ್ನು ಅಪಹರಿಸಿ ಹಲ್ಲೆ ಮಾಡಿದ್ದರು ಎನ್ನಲಾಗಿದೆ. ಅಂದು ರಾತ್ರಿಯೇ ಆರೋಪಿಗಳನ್ನು ಬಂಧಿಸಿದ್ದ ಹೈಗ್ರೌಂಡ್ಸ್‌ ಪೊಲೀಸರು, ಜೈಲಿಗೆ ಕಳುಹಿಸಿದ್ದರು. ಆ ನಂತರವೇ ವಿಜಯ್, ಜಾಮೀನು ಮೇಲೆ ಹೊರಬಂದಿದ್ದರು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು