ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕುದುರೆ ರೇಸ್ ಬೆಟ್ಟಿಂಗ್: ಬಂಧನ

Published 5 ಜೂನ್ 2024, 16:11 IST
Last Updated 5 ಜೂನ್ 2024, 16:11 IST
ಅಕ್ಷರ ಗಾತ್ರ

ಬೆಂಗಳೂರು: ಕುದುರೆ ರೇಸ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಆರೋಪಿ ವೀರೇಂದ್ರಕುಮಾರ್ ಭಂಡಾರಿ (41) ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ವಿಜಯನಗರದ ಆರ್‌.ಪಿ.ಸಿ ಬಡಾವಣೆಯ ವೀರೇಂದ್ರಕುಮಾರ್, ಪೊಲೀಸ್ ಭಾತ್ಮಿದಾರನೆಂದು ಹೇಳಿಕೊಂಡು ಸುತ್ತಾಡುತ್ತಿದ್ದ. ಕುದುರೆ ರೇಸ್ ಬೆಟ್ಟಿಂಗ್ ಪ್ರಕರಣದಲ್ಲಿ ಈತನನ್ನು ಸೆರೆ ಹಿಡಿಯಲಾಗಿದೆ. ₹ 55,800 ನಗದು ಹಾಗೂ ಎರಡು ಮೊಬೈಲ್ ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.

‘ಪೊಲೀಸ್ ಹೆಸರು ಹೇಳಿಕೊಂಡು ಆರೋಪಿ ಹಲವು ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದನೆಂಬ ಮಾಹಿತಿ ಇದ್ದು, ಪರಿಶೀಲಿಸಲಾಗುತ್ತಿದೆ’ ಎಂದರು.

‘ಜೂನ್ 1ರಂದು ಊಟಿಯಲ್ಲಿ ಕುದುರೆ ರೇಸ್ ನಡೆದಿತ್ತು. ಈ ರೇಸ್ ಮೇಲೆಯೇ ಆರೋಪಿ ಬೆಟ್ಟಿಂಗ್ ನಡೆಸುತ್ತಿದ್ದ. ಮೊಬೈಲ್‌ನಲ್ಲಿ ಹಲವು ಆ್ಯಪ್ ಇನ್‌ಸ್ಟಾಲ್ ಮಾಡಿಕೊಂಡಿದ್ದ ಈತ, ಅದರ ಸಹಾಯದಿಂದ ಜನರನ್ನು ಸಂಪರ್ಕಿಸಿ ಹಣ ಕಟ್ಟಿಸಿಕೊಳ್ಳುತ್ತಿದ್ದ. ಈ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಕಾರ್ಯಾಚರಣೆ ನಡೆಸಿ ಮಾಧವನಗರದ ಕ್ರೆಸೆಂಟ್ ರಸ್ತೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT