ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ‘ಅಧಿವೇಶನದ ವೇಳೆ ಒಳ ಮಿಸಲಾತಿ ಹೋರಾಟ ತೀವ್ರ'

Last Updated 27 ಜನವರಿ 2023, 6:11 IST
ಅಕ್ಷರ ಗಾತ್ರ

ಬೆಂಗಳೂರು: ಒಳ ಮೀಸಲಾತಿಗಾಗಿ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಯುತ್ತಿರುವ ಧರಣಿ 46 ದಿನ ಪೂರೈಸಿದ್ದು, ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಹೋರಾಟ ತೀವ್ರಗೊಳಿಸಲು ಪರಿಶಿಷ್ಟ ಜಾತಿಯ ಒಳಮೀಸಲಾತಿ ಹೋರಾಟ ಜಾರಿ ಹೋರಾಟ ಸಮಿತಿ ನಿರ್ಧರಿಸಿದೆ.

ಧರಣಿ ಸ್ಥಳದಲ್ಲಿ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು. ದಲಿತ ಸಂಘರ್ಷ ಸಮಿತಿ ಮುಖಂಡ ಎನ್.ವೆಂಕಟೇಶ್ ಅವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿದರು. ಬಳಿಕ ಮಾತನಾಡಿದ ಅವರು, ‘ಒಳ ಮೀಸಲಾತಿ ವಿಷಯದಲ್ಲಿ ಬಿಜೆಪಿ ಕೇವಲ ಮಾತಿನಲ್ಲೇ ಹೊಟ್ಟೆ ತುಂಬಿಸುತ್ತಿದೆ. ಒಳಮೀಸಲಾತಿ ಜಾರಿ ಆಗುವ ತನಕ ಹೋರಾಟ ನಿಲ್ಲುವುದಿಲ್ಲ. ಸರ್ಕಾರ ಮಾಡುತ್ತಿರುವ ಮೋಸಕ್ಕೆ ಚುನಾವಣೆ ಸಂದರ್ಭದಲ್ಲಿ ತಕ್ಕ ಪಾಠ ಕಲಿಸಲಾಗುವುದು’ ಎಂದು ಎಚ್ಚರಿಸಿದರು.

ಹೋರಾಟಗಾರ ಅಂಬಣ್ಣ ಅರೋಲಿಕರ್ ಸಂವಿಧಾನ ಪೀಠಿಕೆ ಓದಿದರು. ಎಸ್.ಮಾರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಳಿಕ ಸಭೆ ನಡೆಸಿದ ದಲಿತ ಮುಖಂಡರು, ಅಧಿವೇಶನದ ಸಂದರ್ಭದಲ್ಲಿ ಹೋರಾಟ ದೊಡ್ಡದಾಗಿಸಲು ನಿರ್ಧರಿಸಿದರು.

ದಲಿತ ವಿರೋಧಿ, ಕೋಮುವಾದಿ ಬಿಜೆಪಿ ಪಕ್ಷವನ್ನು ಸೋಲಿಸಬೇಕು ಮತ್ತು ಅದಕ್ಕಾಗಿ ಫೆಬ್ರುವರಿ ಮೊದಲ ವಾರದಿಂದ ರಾಜ್ಯದ 150 ವಿಧಾನಸಭಾ ಕ್ಷೇತ್ರಗಳಲ್ಲಿ ಎಲ್ಲಾ ಪರಿಶಿಷ್ಟ ಜಾತಿಗಳ ನಾಯಕರ ಪ್ರವಾಸ ಕೈಗೊಳ್ಳಲು ತೀರ್ಮಾನಿಸಲಾಯಿತು. ಮಾದಿಗ ಸಂಬಂಧಿತ ತ್ರಿಮತಸ್ಥ (ಸಮಗಾರ, ಮೋಚಿ, ಮಚ್ಚಗಾರ) ಸಮಯದಾಯಗಳಿಗೆ ಪ್ರತ್ಯೇಕ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಒತ್ತಾಯಿಸಲು ನಿರ್ಧರಿಸಲಾಯಿತು.

ಮುಖಂಡರಾದ ಹೆಣ್ಣೂರು ಶ್ರೀನಿವಾಸ್, ಬಸವರಾಜ ಕೌತಾಳ್, ಆರ್.ಮೋಹನರಾಜ್, ಸಿ.ದಾನಪ್ಪ ಮದೋಗಲ್, ಎಂ.ಗುರುಮೂರ್ತಿ, ಕೇಶವಮೂರ್ತಿ, ಜನಶಕ್ತಿ ಗೌರಿ, ಗೌಡಗೆರೆ ಮಾಯುಶ್ರೀ, ಬಿ.ಆರ್.ಭಾಸ್ಕರ್ ಪ್ರಸಾದ್, ನಾಗಮಣಿ, ಕರಿಯಪ್ಪ ಗುಡಿಮನಿ, ಕನಕೇನಹಳ್ಳಿ ಕೃಷ್ಣಪ್ಪ, ಹೇಮರಾಜ್, ಪುಷ್ಪಲತ, ವೆಂಕಟೇಶ್, ನಂದಕುಮಾರ್, ಕರ್ನಾಟಕ ರಾಜ್ಯ ತ್ರಿಮತಸ್ಥ ಸಮಾಜ ಪರಿಷತ್ ಅಧ್ಯಕ್ಷ ಗುರುರಾಜ್ ಬೇಡಿಕರ್, ಅಲೆಮಾರಿ ಬುಡಕಟ್ಟು ಮಹಾಸಭಾ ಅಧ್ಯಕ್ಷ ಬಿ.ಎಲ್. ಹನುಮಂತಪ್ಪ, ಸಹಬಾಳೆ ಸಂಸ್ಥೆಯ ಮಹಮದ್ ಯೂಸೂಫ್ ಖನಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT