ಬೆಂಗಳೂರು: ಬಂದೋಬಸ್ತ್ ಕರ್ತವ್ಯಗಳಿಗೆ ನಿಯೋಜಿಸುವ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಪಾವತಿಸುತ್ತಿರುವ ಆಹಾರ ಭತ್ಯೆಯನ್ನು ₹ 200ರಿಂದ ₹ 300ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹಬ್ಬದ ದಿನಗಳು, ವಿಶೇಷ ಹಾಗೂ ಚುನಾವಣಾ ಸಂದರ್ಭದಲ್ಲಿ ಬಂದೋಬಸ್ತ್ಗೆಂದು ಬೇರೆ ಬೇರೆ ಕಡೆಯ ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯಕ್ಕೆ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಈ ರೀತಿ ಕರ್ತವ್ಯಕ್ಕೆ ನಿಯೋಜಿಸಿದವರಿಗೆ ಆಹಾರದ ಭತ್ಯೆ ನೀಡಲಾಗುತ್ತಿದೆ.

ಈ ಹಿಂದೆ ಬಂದೋಬಸ್ತ್ಗೆ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿಗೆ ನೀಡಲಾಗಿದ್ದ ಆಹಾರದಲ್ಲಿ ಜಿರಳೆ ಮತ್ತು ಹುಳುಗಳು ಪತ್ತೆಯಾಗಿದ್ದವು. ಇದರಿಂದ ಸಿಬ್ಬಂದಿ ತೀವ್ರ ಬೇಸರ ಹೊರಹಾಕಿದ್ದರು.

‘ಸರ್ಕಾರ ಈಗ ಆಹಾರದ ಭತ್ಯೆಯನ್ನು ಹೆಚ್ಚಿಸಿದೆ. ಇನ್ನಾದರೂ ಗುಣಮಟ್ಟದ ಆಹಾರವನ್ನು ಪೂರೈಸಬೇಕು’ ಎಂದು ಪೊಲೀಸ್ ಸಿಬ್ಬಂದಿ ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.