ಮಾನಹಾನಿ ಸುದ್ದಿ ಪ್ರಕಟಿಸದಂತೆ ತಡೆಯಾಜ್ಞೆ: ಡಿವಿಎಸ್ ಸ್ಪಷ್ಟನೆ

ಬೆಂಗಳೂರು: ತಮ್ಮ ಮಾನಕ್ಕೆ ಹಾನಿ ತರುವ ಯಾವುದೇ ಸುದ್ದಿಯನ್ನು ಪ್ರಕಟಿಸಬಾರದು ಎಂದು ಮಾಧ್ಯಮಗಳ ವಿರುದ್ಧ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವುದು ಈಗ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಈ ಮಧ್ಯೆ, ಟ್ವೀಟ್ ಮಾಡಿರುವ ಡಿವಿಎಸ್, ‘ಚುನಾವಣೆ, ಸಂಪುಟ ರಚನೆ ಸಂದರ್ಭದಲ್ಲಿ ವಿರೋಧಿಗಳು ಈ ಮುಂಚೆಯೂ ನನ್ನ ವೈಯಕ್ತಿಕ ತೇಜೋವಧೆಗೆ ಪ್ರಯತ್ನಿಸಿದ್ದರು. ಮಾಧ್ಯಮ ಸ್ವಾತಂತ್ರ್ಯವನ್ನು ನಾನು ಸಂಪೂರ್ಣ ಗೌರವಿಸುತ್ತೇನೆ. ಆದರೆ ವಿರೋಧಿಗಳ ಸಂಚಿಗೆ ಬಲಿಯಾಗಿ ತಪ್ಪು ಮಾಹಿತಿ ಪ್ರಸರಣದಲ್ಲಿ ತೊಡಗಬಾರದೆಂಬ ಉದ್ದೇಶದಿಂದ ನಿರ್ಬಂಧ ಆದೇಶ ತರಬೇಕಾಗಿ ಬಂತು. ದಯವಿಟ್ಟು ಯಾರೂ ಅನ್ಯಥಾ ಭಾವಿಸಬಾರದು’ ಎಂದು ತಿಳಿಸಿದ್ದಾರೆ.
ಚುನಾವಣೆ, ಸಂಪುಟ ರಚನೆ ಸಂದರ್ಭದಲ್ಲಿ ವಿರೋಧಿಗಳು ಈ ಮುಂಚೆಯೂ ನನ್ನ ವಯಕ್ತಿಕ ತೇಜೋವಧೆಗೆ ಪ್ರಯತ್ನಸಿದ್ದರು.
ಮಾಧ್ಯಮ ಸ್ವಾತಂತ್ರ್ಯವನ್ನು ನಾನು ಸಂಪೂರ್ಣ ಗೌರವಿಸುತ್ತೇನೆ. ಆದರೆ ವಿರೋಧಿಗಳ ಸಂಚಿಗೆ ಬಲಿಯಾಗಿ ತಪ್ಪುಮಾಹಿತಿ ಪ್ರಸರಣದಲ್ಲಿ ತೊಡಗಬಾರದೆಂಬ ಉದ್ದೇಶದಿಂದ ನಿರ್ಬಂಧ ಆದೇಶ ತರಬೇಕಾಗಿ ಬಂತು. ದಯವಿಟ್ಟು ಯಾರೂ ಅನ್ಯತಾ ಭಾವಿಸಬಾರದು— Sadananda Gowda (@DVSadanandGowda) July 2, 2021
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.