ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸದಾಶಿವ ಸೊರಟೂರು, ನಿಜಾಮ್ ಗೋಳಿಪಡ್ಪು ಅವರಿಗೆ ಈ ಹೊತ್ತಿಗೆ ಟ್ರಸ್ಟ್ ಪ್ರಶಸ್ತಿ

Published 17 ಜನವರಿ 2024, 14:46 IST
Last Updated 17 ಜನವರಿ 2024, 14:46 IST
ಅಕ್ಷರ ಗಾತ್ರ

ಬೆಂಗಳೂರು: ಈ ಹೊತ್ತಿಗೆ ಟ್ರಸ್ಟ್ ನೀಡುವ ‘ಈ ಹೊತ್ತಿಗೆ ಕಥಾ ಪ್ರಶಸ್ತಿ’ಗೆ ದಾವಣಗೆರೆಯ ಸದಾಶಿವ ಸೊರಟೂರು ಅವರ ‘ಧ್ಯಾನಕ್ಕೆ ಕೂತ ನದಿ’ ಅಪ್ರಕಟಿತ ಕಥಾಸಂಕಲನ, ‘ಈ ಹೊತ್ತಿಗೆ ಕಾವ್ಯ ಪ್ರಶಸ್ತಿ’ಗೆ ಮಂಗಳೂರಿನ ಸಜೀಪನಡು ಊರಿನ ನಿಜಾಮ್ ಗೋಳಿಪಡ್ಪು ಅವರ ‘ಅನಾಮಧೇಯ ಗೀರುಗಳು’ ಅಪ್ರಕಟಿತ ಕವನ ಸಂಕಲನ ಆಯ್ಕೆಯಾಗಿವೆ. 

ಪ್ರಶಸ್ತಿಗಳು ತಲಾ ₹ 10 ಸಾವಿರ ನಗದು ಒಳಗೊಂಡಿವೆ. ಕಥೆಗಾರ ಹಾಗೂ ಪತ್ರಕರ್ತ ದೇವು ಪತ್ತಾರ್ ಅವರು ಕಥಾ ಪ್ರಶಸ್ತಿ ಮತ್ತು ಕವಯತ್ರಿ ಪ್ರತಿಭಾ ನಂದಕುಮಾರ್ ಕಾವ್ಯ ಪ್ರಶಸ್ತಿಯ ತೀರ್ಪುಗಾರರಾಗಿದ್ದರು. 

ಮಾರ್ಚ್‌ನಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಈ ಹೊತ್ತಿಗೆಯ ಹೊನಲು ಕಾರ್ಯಕ್ರಮದಲ್ಲಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT