ಬೆಂಗಳೂರು: ಇ-ಖಾತಾ ತಿದ್ದುಪಡಿಯನ್ನು ಸರಳಗೊಳಿಸಬೇಕು ಎಂದು ಎಫ್ಕೆಸಿಸಿಐ ಪದಾಧಿಕಾರಿಗಳು ಸರ್ಕಾರವನ್ನು ಒತ್ತಾಯಿಸಿದರು.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ) ಶನಿವಾರ ಆಯೋಜಿಸಿದ್ದ ರಾಜ್ಯಮಟ್ಟದ ಜಿಲ್ಲಾ ವಾಣಿಜ್ಯ, ಕೈಗಾರಿಕಾ ಸಂಸ್ಥೆಗಳ ಸಮ್ಮೇಳನದಲ್ಲಿ ಈ ಆಗ್ರಹ ಮಂಡಿಸಲಾಯಿತು.

ಎಫ್ಕೆಸಿಸಿಐ ಅಧ್ಯಕ್ಷ ಎಂ.ಜಿ. ಬಾಲಕೃಷ್ಣ ಮಾತನಾಡಿ, ‘ಇ-ಖಾತಾದಲ್ಲಿ ಸಣ್ಣ ಅಕ್ಷರ ತೊಂದರೆಯಾದರೂ ಅದನ್ನು ಸರಿಪಡಿಸಲು ಐದಾರು ತಿಂಗಳು ಬೇಕಾಗುತ್ತದೆ. ಮೇಲಧಿಕಾರಿಗಳ ಒಪ್ಪಿಗೆ ಬೇಕಾಗುತ್ತದೆ. ಸರಳೀಕರಿಸುವ ಮೂಲಕ ತಿದ್ದುಪಡಿ ಬೇಗ ಆಗುವಂತೆ ಮಾಡಬೇಕು’ ಎಂದು ಮನವಿ ಮಾಡಿದರು.

ಕಾವೇರಿ ಪೋರ್ಟಲ್ ಕಾರ್ಯ ನಿರ್ವಹಿಸುತ್ತಿಲ್ಲ. ಸರಿಪಡಿಸಲು ಕ್ರಮ ಕೈಗೊಳ್ಳಬೇಕು. ಪಂಚಾಯಿತಿ ಮಟ್ಟದಲ್ಲಿ ತೆರಿಗೆಯಲ್ಲೂ ಕಾನೂನು ಉಲ್ಲಂಘನೆ ಆಗುತ್ತಿದೆ. ಪಿಡಿಒಗಳು ನೀತಿ ನಿಯಮ ಪಾಲನೆ ಮಾಡಲು ಸೂಚಿಸಬೇಕು ಎಂದು ಹೇಳಿದರು.

ಪರಿಸರ ಇಲಾಖೆಯ ಹಿರಿಯ ವಿಭಾಗೀಯ ಅಧಿಕಾರಿ ಸೈಯದ್ ಖಾಜಾ ಮೊಹಿದ್ದೀನ್, ಸಂಸ್ಥೆಯ ಚುನಾಯಿತ ಅಧ್ಯಕ್ಷೆ ಉಮಾರೆಡ್ಡಿ, ಹಿರಿಯ ಉಪಾಧ್ಯಕ್ಷ ಟಿ. ಸಾಯಿರಾಂ ಪ್ರಸಾದ್, ನಿಕಟಪೂರ್ವ ಅಧ್ಯಕ್ಷ ರಮೇಶ್ ಚಂದ್ರ ಲಹೋಟಿ, ಅಂಡಾರು ದೇವಿ ಪ್ರಸಾದ್ ಶೆಟ್ಟಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.