ಶುಕ್ರವಾರ, ಜೂನ್ 18, 2021
23 °C

ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಉಚಿತ ಆನ್‌ಲೈನ್‌ ತರಬೇತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ಪ್ರಸಕ್ತ ಸಾಲಿನಲ್ಲಿ ಹತ್ತನೇ ತರಗತಿಯಲ್ಲಿ ಓದುತ್ತಿರುವ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಉಚಿತವಾಗಿ ಆನ್‌ಲೈನ್‌ ಶಿಕ್ಷಣ ತರಬೇತಿ ಕೊಡಲು ‘ಸತ್ಯಂ ಶಿವಂ ಸುಂದರಂ’ ಸರ್ಕಾರೇತರ ಸಂಸ್ಥೆ ಮುಂದಾಗಿದೆ. 

‘ಇದು ನಮ್ಮ ಇ ಶಾಲೆ’ ಯೋಜನೆಯಡಿ ಫೇಸ್‌ಬುಕ್‌–ಯೂಟ್ಯೂಬ್‌ ಮೂಲಕ ಈ ಉಚಿತ ಶಿಕ್ಷಣ ನೀಡಲಾಗುವುದು’ ಎಂದು ಸಂಸ್ಥೆಯ ಅಧ್ಯಕ್ಷ ರವಿರಾಜ್‌ ಜೀವನ್‌ರಾವ್ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

‘ರಾಜ್ಯದಾದ್ಯಂತ ನುರಿತ ಶಿಕ್ಷಕರು ತರಗತಿ ತೆಗೆದುಕೊಳ್ಳಲಿದ್ದಾರೆ’ ಎಂದು ಅವರು ಹೇಳಿದ್ದಾರೆ. 

ವಿವರಗಳಿಗೆ http://satyamshivamsundaram.org ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಅಥವಾ sathyamngo@gmail.com ಗೆ ಮೇಲ್‌ ಮಾಡಬಹುದು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.