ಶುಕ್ರವಾರ, ಮೇ 27, 2022
31 °C

ಫೋರ್ಟಂ ಜಾರ್ಚ್‌: ಏಕಕಾಲಕ್ಕೆ 50 ಕಾರುಗಳಿಗೆ ಚಾರ್ಜಿಂಗ್‌ ಸೌಲಭ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭಾರತದಲ್ಲಿ ಎಲೆಕ್ಟ್ರಿಕ್‌ ವಾಹನ (ಇವಿ) ಉತ್ತೇಜಿಸುವ ಉದ್ದೇಶದಿಂದ ಫೋರ್ಟಮ್ ಚಾರ್ಜ್‌ ಮತ್ತು ಡ್ರೈವ್‌ ಇಂಡಿಯಾ, ನಗರದ ಫೋರಂ ನೈಬರ್‌ಹುಡ್ ಮಾಲ್‌ನಲ್ಲಿ 50 ಚಾರ್ಜಿಂಗ್‌ ಪಾಯಿಂಟ್‌ಗಳನ್ನು ಆರಂಭಿಸುವ ಮೂಲಕ ಇವಿ- ಸಾರ್ವಜನಿಕ ಹಬ್‌ ಆರಂಭಿಸಲು ಮುಂದಾಗಿದೆ.

ಈ ಚಾರ್ಜಿಂಗ್‌ ಹಬ್‌ ಎಲ್ಲ ಬಗೆಯ ಕಾರುಗಳ ಜೊತೆಗೆ, ತ್ರಿಚಕ್ರ ಹಾಗೂ ದ್ವಿಚಕ್ರ ವಾಹನಗಳಿಗೆ ಚಾರ್ಜಿಂಗ್‌ ಸೌಲಭ್ಯ ಒದಗಿಸುತ್ತದೆ. ಈ ಕೇಂದ್ರವು ಏಕಕಾಲದಲ್ಲಿ 50 ಕಾರುಗಳನ್ನು ಚಾರ್ಜ್ ಮಾಡಲು ಅವಕಾಶ ಕಲ್ಪಿಸುತ್ತದೆ.

ಈ ಸೌಲಭ್ಯವು ಇವಿ ಮಾಲೀಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸುತ್ತದೆ. ಇವಿ ಬಳಕೆದಾರರು ಫೋರ್ಟಂ ಚಾರ್ಜ್ ಮತ್ತು ಡ್ರೈವ್ ಇಂಡಿಯಾ ಮೊಬೈಲ್ ಅಪ್ಲಿಕೇಶನ್ ಮೂಲಕ ಇವಿ-ಚಾರ್ಜಿಂಗ್ ಕೇಂದ್ರಗಳನ್ನು ಪತ್ತೆ ಮಾಡಬಹುದು ಮತ್ತು ಅವರ ಇವಿ ಅನ್ನು ಚಾರ್ಜ್ ಮಾಡಲು ಮತ್ತು ಡಿಜಿಟಲ್ ಆಗಿ ಪಾವತಿ ಸಲು ಅಪ್ಲಿಕೇಶನ್ ಅನ್ನು ಬಳಸಬಹುದು. ಈ ಅಪ್ಲಿಕೇಶನ್ ಆ್ಯಂಡ್ರಾಯ್ಡ್‌ ಮತ್ತು ಐಒಎಸ್‌ ಎರಡೂ ಪ್ಲಾಟ್‌ಫಾರ್ಮ್‌ಗಳಲ್ಲಿ ಲಭ್ಯವಿದೆ ಎಂದು ಸಂಸ್ಥೆ ತಿಳಿಸಿದೆ.

ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ಹಬ್ ಅನ್ನು ಉದ್ಘಾಟಿಸಿ, ‘ನಗರವು 45,000 ಕ್ಕೂ ಹೆಚ್ಚು ಎಲೆಕ್ಟ್ರಿಕ್ ವಾಹನ ಬಳಕೆದಾರರನ್ನು ಹೊಂದಿದೆ. ಇದು ಇವಿಗಳ (ಎಲೆಕ್ಟ್ರಿಕ್ ವಾಹನಗಳು) ಬೇಡಿಕೆ ಹೆಚ್ಚುತ್ತಿದೆ ಎಂಬುದನ್ನು ಸೂಚಿಸುತ್ತದೆ’ ಎಂದರು. 

ಫೋರ್ಟಮ್ ಚಾರ್ಜ್ ಕಾರ್ಯನಿರ್ವಾಹಕ ನಿರ್ದೇಶಕ ಅವಧೇಶ್ ಝಾ, ‘ಈ ವರ್ಷದ ಅಂತ್ಯದ ವೇಳೆಗೆ ನಗರದಲ್ಲಿ 200 ಕ್ಕೂ ಹೆಚ್ಚು ಚಾರ್ಜಿಂಗ್ ಪಾಯಿಂಟ್‌ಗಳನ್ನು ಸ್ಥಾಪಿಸಲು ನಾವು ಯೋಜಿಸಿದ್ದೇವೆ. ಇದು ಸುಸ್ಥಿರ ಸಾರಿಗೆಯತ್ತ ಸಾಗುವ ಪ್ರಯಾಣದಲ್ಲಿ ಬೆಂಗಳೂರಿನ ಪ್ರಮುಖ ಮೈಲಿಗ ಲ್ಲಾಗಲಿದೆ’ ಎಂದರು. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.