ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನ ಹಲವೆಡೆ ಭೂಮಿ ಕಂಪಿಸಿದ ಅನುಭವ

Last Updated 26 ನವೆಂಬರ್ 2021, 9:41 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರಿನ ಹಲವು ಕಡೆ ಶುಕ್ರವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಆದರೆ, ರಿಕ್ಟರ್‌ ಮಾಪಕದಲ್ಲಿ ಭೂಕಂಪನ ಆಗಿರುವ ಬಗ್ಗೆ ಈವರೆಗೆ ಯಾವುದೇ ವರದಿಯಾಗಿಲ್ಲ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮೂಲಗಳು ತಿಳಿಸಿವೆ.

ನಗರದ ಹೆಮ್ಮಿಗೆಪುರ, ಕಗ್ಗಲೀಪುರ, ಕೆಂಗೇರಿ, ರಾಜರಾಜೇಶ್ವರಿ ನಗರ, ಜ್ಞಾನಭಾರತಿ, ಮೈಸೂರು ರಸ್ತೆಯ ಕೆಲವು ಪ್ರದೇಶಗಳಲ್ಲಿ ಭೂಮಿ ಕಂಪಿಸಿರುವ ಬಗ್ಗೆ ಸ್ಥಳೀಯರು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರಕ್ಕೆ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೆಎಸ್‌ಎನ್‌ಡಿಎಂಸಿ, ಬೆಂಗಳೂರಿನಲ್ಲಿ ಭೂಕಂಪನ ಆಗಿಲ್ಲ ಎಂದಿದೆ.

‘ಬೆಳಗ್ಗೆ 11.50ರಿಂದ ಮಧ್ಯಾಹ್ನ 12.15ರ ಅವಧಿಯಲ್ಲಿ ಭೂಕಂಪನ / ಸಂಭವನೀಯ ಭೂಕಂಪದ ಸಂಕೇತಗಳು ಹೊಮ್ಮಿವೆಯೇ ಎಂಬುದನ್ನು ವಿಶ್ಲೇಷಕರು ಪರಿಶೀಲಿಸಿದ್ದಾರೆ. ಆದರೆ, ಅಂಥ ಯಾವುದೇ ಸಂಕೇತಗಳು ಕಂಡುಬಂದಿಲ್ಲ’ಎಂದು ಕೆಎಸ್‌ಎನ್‌ಡಿಎಂಸಿ ಸ್ಪಷ್ಟಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT