ಬೆಂಗಳೂರು: ‘ಉಗಾಂಡದಿಂದ ಇಲ್ಲಿಗೆ ಬಂದಿದ್ದ 28 ವರ್ಷದ ಮಹಿಳೆ ಎಬೋಲಾ ಸೋಂಕಿತರಾಗಿಲ್ಲ ಎನ್ನುವುದು ಪ್ರಯೋಗಾಲಯದ ಪರೀಕ್ಷಾ ವರದಿಯಿಂದ ದೃಢಪಟ್ಟಿದೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ಇದೇ 23ರಂದು ಉಗಾಂಡದಿಂದ ಬೆಂಗಳೂರಿಗೆ ಬಂದಿದ್ದ ಮಹಿಳೆ, ಇಲ್ಲಿನ ಹೋಟೆಲ್ನಲ್ಲಿ ವಾಸವಾಗಿದ್ದರು. ಅವರಿಗೆ ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದವು. ಪ್ರತ್ಯೇಕ ವಾಸಕ್ಕಾಗಿ ಆಂಬುಲೆನ್ಸ್ ಮೂಲಕ ಸಾಂಕ್ರಾಮಿಕ ರೋಗಗಳ ಆಸ್ಪತ್ರೆಗೆ (ಎಪಿಡೆಮಿಕ್ ಡಿಸೀಸ್ ಆಸ್ಪತ್ರೆ) ಅವರನ್ನು ಸ್ಥಳಾಂತರ ಮಾಡಲಾಗಿತ್ತು. ಸೋಂಕು ಪತ್ತೆಗೆ ಅವರ ರಕ್ತದ ಮಾದರಿಯನ್ನು ಸಂಗ್ರಹಿಸಿ, ರಾಷ್ಟ್ರೀಯ ವೈರಾಣು ಸಂಸ್ಥೆಯ (ಎನ್ಐವಿ) ಬೆಂಗಳೂರು ಘಟಕದ ಮೂಲಕ ಪುಣೆಯ ಎನ್ಐವಿಗೆ ಕಳುಹಿಸಲಾಗಿತ್ತು.

ಈ ಬಗ್ಗೆ ‘ಎಕ್ಸ್’ ಮಾಡಿರುವ ದಿನೇಶ್ ಗುಂಡೂರಾವ್, ‘ಎಬೋಲಾ ಶಂಕಿತ ಪ್ರಕರಣದ ಪ್ರಯೋಗಾಲಯದ ಪರೀಕ್ಷಾ ವರದಿ ಬಂದಿದ್ದು, ಮಹಿಳೆ ಎಬೋಲಾ ಸೋಂಕಿತರಾಗಿಲ್ಲ ಎನ್ನುವುದು ಖಚಿತಪಟ್ಟಿದೆ. ಶಂಕೆ ವ್ಯಕ್ತವಾದ ತಕ್ಷಣವೇ ಇಲಾಖೆಯು ಸಾರ್ವಜನಿಕ ಆರೋಗ್ಯ ಮಾರ್ಗಸೂಚಿಗಳ ಅನ್ವಯ ಕಟ್ಟುನಿಟ್ಟಾದ ಮುನ್ನೆಚ್ಚರಿಕೆ ಕ್ರಮಗಳು ಮತ್ತು ವೈದ್ಯಕೀಯ ನಿಯಮಗಳನ್ನು ಪಾಲಿಸಿದೆ’ ಎಂದು ಹೇಳಿದ್ದಾರೆ.

‘ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆಯೇ ನಮ್ಮ ಸರ್ಕಾರದ ಮೊದಲ ಆದ್ಯತೆಯಾಗಿದೆ. ಯಾರೂ ಆತಂಕಕ್ಕೆ ಒಳಗಾಗಬಾರದು. ನಿಗದಿಪಡಿಸಿದ ಆರೋಗ್ಯ ಮಾರ್ಗಸೂಚಿಗಳನ್ನು ಪಾಲಿಸಬೇಕು’ ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.