ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್ಥಿಕ ಬಿಕ್ಕಟ್ಟು: ಪರಿಹಾರ ಮೊತ್ತ ಹೆಚ್ಚಳಕ್ಕೆ ನಕಾರ

Last Updated 27 ಆಗಸ್ಟ್ 2020, 4:43 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ ಕರ್ತವ್ಯದಲ್ಲಿದ್ದಾಗ ಮರಣ ಹೊಂದಿದ ಸರ್ಕಾರಿ ನೌಕರನ ಕುಟುಂಬಕ್ಕೆ ನೀಡುತ್ತಿರುವ ₹30 ಲಕ್ಷ ಪರಿಹಾರ ಮೊತ್ತವನ್ನು ಇನ್ನಷ್ಟು ಹೆಚ್ಚಿಸಲು ನಿರಾಕರಿಸಿರುವ ರಾಜ್ಯ ಸರ್ಕಾರ,ಹಣಕಾಸಿನ ಬಿಕ್ಕಟ್ಟಿನ ಕಾರಣವನ್ನು ಹೈಕೋರ್ಟ್‌ಗೆ ತಿಳಿಸಿದೆ.

ಆರೋಗ್ಯ ಕಾರ್ಯಕರ್ತರಿಗೆ ಕೇಂದ್ರ ಸರ್ಕಾರ ನೀಡುತ್ತಿರುವ ₹50 ಲಕ್ಷ ವಿಮಾ ಯೋಜನೆಗೆ ಸಮನಾಗಿ ಪರಿಹಾರ ನೀಡುವ ಸಾಧ್ಯತೆ ಬಗ್ಗೆ ಪರಿಗಣಿಸುವಂತೆ ಹೈಕೋರ್ಟ್‌ ಹೇಳಿತ್ತು.

‘ಆರೋಗ್ಯ ಕಾರ್ಯಕರ್ತರನ್ನು ಬಿಟ್ಟು ಬೇರೆ ಕೆಲಸ ಮಾಡುವ ಎಲ್ಲರಿಗೂ ರಾಜ್ಯ ಸರ್ಕಾರ ₹30 ಲಕ್ಷ ಪರಿಹಾರ ನೀಡುತ್ತಿದೆ’ ಎಂದು ಅಫಿಡವಿಟ್‌ನಲ್ಲಿ ತಿಳಿಸಿದೆ.

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪೌರ ಕಾರ್ಮಿಕರಿಗೆ ಮತ್ತು ಗುತ್ತಿಗೆ ಆಧಾರದ ನೌಕರರಿಗೆ ವೇತನ ಪಾವತಿಸುತ್ತಿರುವುದನ್ನು ಖಚಿತಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಪೀಠ ನಿರ್ದೇಶನ ನೀಡಿತು.

‘ಪೌರ ಕಾರ್ಮಿಕರಿಗೆ ಸಂಬಳ ನೀಡದಿರುವುದಕ್ಕೆ ಯಾವುದೇ ಸಮರ್ಥನೆ ನೀಡುವಂತಿಲ್ಲ. ಸಂಬಳ ನೀಡಲು ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶನ ನೀಡಬೇಕು’ ಎಂದು ತಿಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT