ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 526 ಕೋಟಿ ವಂಚನೆ: ಕರಣ್ ಗ್ರೂಪ್ ಮುಖ್ಯಸ್ಥ ಬಂಧನ

Last Updated 13 ಜನವರಿ 2023, 5:06 IST
ಅಕ್ಷರ ಗಾತ್ರ

ಬೆಂಗಳೂರು: ರಿಯಲ್ ಎಸ್ಟೇಟ್ ಹೂಡಿಕೆ ಹೆಸರಿನಲ್ಲಿ ಸಾರ್ವಜನಿಕರಿಂದ ₹ 526 ಕೋಟಿ ಸಂಗ್ರಹಿಸಿ ವಂಚಿಸಿದ್ದ ಪ್ರಕರಣದಲ್ಲಿ ಕರಣ್ ಗ್ರೂಪ್ ಬಿಲ್ಡರ್ಸ್ ಆ್ಯಂಡ್ ಡೆವಲಪರ್ಸ್ ಕಂಪನಿ ಮುಖ್ಯಸ್ಥ ಮಹೇಶ್ ಬಿ. ಓಝಾ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬಂಧಿಸಿದ್ದಾರೆ.

ಮುಂಬೈನ ಮಹೇಶ್, ರಿಯಲ್ ಎಸ್ಟೇಟ್‌ನ ನಾನಾ ಯೋಜನೆಗಳ ಹೆಸರಿನಲ್ಲಿ ಹಣ ಸಂಗ್ರಹಿಸಿ ವಂಚಿಸಿದ್ದ. ಈ ಸಂಬಂಧ ಕರ್ನಾಟಕದ ವಿವಿಧ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು. ಕರ್ನಾಟಕ ಸಿಐಡಿ ಅಧಿಕಾರಿಗಳು ಸಹ ಮಹೇಶ್‌ ಅವರನ್ನು ಬಂಧಿಸಿದ್ದರು. ನಂತರ, ಆರೋಪಿ ಜಾಮೀನು ಪಡೆದುಕೊಂಡಿದ್ದರು.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದ್ದ ಇ.ಡಿ. ಅಧಿಕಾರಿಗಳು, ಮಹೇಶ್ ಅವರನ್ನು ಬಂಧಿಸಿ ಶುಕ್ರವಾರ ನ್ಯಾಯಾಲಯದ ಎದುರು ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿಯನ್ನು 10 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಆರೋಪಿ ಮಹೇಶ್ ವಿರುದ್ಧ ಇ.ಡಿ.ಗೆ ದೂರು ನೀಡಿದ್ದ ದೂರುದಾರ, ‘ಆರೋಪಿ ಮಹೇಶ್ ಇದುವರೆಗೂ ಒಟ್ಟು ₹ 526 ಕೋಟಿ ಹೂಡಿಕೆ ಮಾಡಿಸಿಕೊಂಡಿದ್ದಾರೆ. ಅದರಲ್ಲಿ ಸ್ವಲ್ಪ ಹಣವನ್ನು ಕರಣ್ ಗ್ರೂಪ್‌ ಕಂಪನಿಯಡಿ ಬಳಸಿದ್ದರು. ಉಳಿದ ಹಣವನ್ನು ಬೇರೆ ಬೇರೆ ಕಂಪನಿಗಳ ಹೆಸರಿನಲ್ಲಿ ಅಕ್ರಮ ವಹಿವಾಟು ನಡೆಸಿದ್ದಾರೆ’ ಎಂದು ಆರೋಪಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT