ಶುಕ್ರವಾರ, ಆಗಸ್ಟ್ 19, 2022
22 °C

ಡ್ರಗ್ಸ್ ದಂಧೆ: ಇಸಿಐಆರ್ ದಾಖಲಿಸಿದ ಇ.ಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಡ್ರಗ್ಸ್ ಜಾಲದಲ್ಲಿ ಹವಾಲಾ ವ್ಯವಹಾರ ನಡೆದಿರುವ ಶಂಕೆಯಲ್ಲಿ ತನಿಖೆ ಆರಂಭಿಸಿರುವ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು, ಜಾರಿ ಪ್ರಕರಣ ಮಾಹಿತಿ ವರದಿ (ಇಸಿಐಆರ್‌) ದಾಖಲಿಸಿಕೊಂಡಿದ್ದಾರೆ.

ಡ್ರಗ್ಸ್ ದಂಧೆಯ ವಹಿವಾಟಿನ ಕುರಿತು ಸಿಸಿಬಿ ಕಚೇರಿಯಿಂದ ಮಾಹಿತಿ ಕಲೆ ಹಾಕಿರುವ ಅಧಿಕಾರಿಗಳು, ತನಿಖೆ ಚುರುಕುಗೊಳಿಸಿದ್ದಾರೆ.

ಬೆಂಗಳೂರಿನ ಡ್ರಗ್ಸ್ ಜಾಲದಲ್ಲಿ ಸಿಕ್ಕಿಬಿದ್ದಿರುವ ಆರೋಪಿಗಳಲ್ಲಿ ಕೆಲವರು ವಿದೇಶದ ಡ್ರಗ್ಸ್ ದಂಧೆಕೋರರ ಜತೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪ ಇದೆ. ಈ ಸಂದರ್ಭದಲ್ಲಿ ಹವಾಲಾ ವ್ಯವಹಾರ ನಡೆದಿದೆ ಎಂದು ಶಂಕಿಸಲಾಗಿದೆ.

ಇಡೀ ಡ್ರಗ್ಸ್ ದಂಧೆಯಲ್ಲಿ ಅಕ್ರಮ ಹಣಕಾಸಿನ ವಹಿವಾಟು ನಡೆದಿರುವ ಬಗ್ಗೆ ತನಿಖೆ ನಡೆಸಲು ಇಸಿಐಆರ್ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.