ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನ ಆನ್‌ಲೈನ್ ಶಿಕ್ಷಣ ಸಂಸ್ಥೆ ಮೇಲೆ ಇ.ಡಿ ದಾಳಿ: ₹8.6 ಕೋಟಿ ನಗದು ಜಪ್ತಿ

Published 19 ಮೇ 2023, 16:28 IST
Last Updated 19 ಮೇ 2023, 16:28 IST
ಅಕ್ಷರ ಗಾತ್ರ

ಬೆಂಗಳೂರು: ಚೀನಾ ನಾಗರಿಕರ ಮಾಲೀಕತ್ವದ ಆನ್‌ಲೈನ್ ಶಿಕ್ಷಣ ಸಂಸ್ಥೆ ಮೇಲೆ ದಾಳಿ ಮಾಡಿರುವ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ಶುಕ್ರವಾರ ₹8.26 ಕೋಟಿ ಹಣವನ್ನು ವಶಕ್ಕೆ ಪಡೆದಿದ್ದಾರೆ. ವಿದೇಶಿ ವಿನಿಮಯ ಕಾನೂನು ಉಲ್ಲಂಘನೆ ಆರೋಪದಡಿ ಈ ದಾಳಿ ನಡೆದಿದೆ.

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ(ಫೆಮಾ) ಸೆಕ್ಷನ್ 37ಎ ಅಡಿ ಪಿಜಿಯನ್ ಎಜುಕೇಶನ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೇಡ್‌ನಲ್ಲಿ ಹಣ ಜಪ್ತಿ ಮಾಡಲಾಗಿದೆ ಎಂದು ಇ.ಡಿ ಪ್ರಕಟಣೆಯಲ್ಲಿ ತಿಳಿಸಿದೆ.

‘ಓಡಾ ಕ್ಲಾಸ್’ ಬ್ರಾಂಡ್ ಹೆಸರಿನಲ್ಲಿ ಸಂಸ್ಥೆಯು ಆನ್‌ಲೈನ್ ತರಗತಿಗಳನ್ನು ನಡೆಸುತ್ತದೆ ಎಂದು ಅದು ಹೇಳಿದೆ.

ಏಪ್ರಿಲ್‌ನಲ್ಲಿ ಈ ಸಂಸ್ಥೆ ಮೇಲೆ ಇ.ಡಿ ದಾಳಿ ನಡೆಸಿತ್ತು. ಕಂಪನಿಯು 100 ಪ್ರತಿಶತದಷ್ಟು ಚೀನಾದ ಪ್ರಜೆಗಳ ಒಡೆತನದಲ್ಲಿದೆ. ಕಂಪನಿಯ ಹಣಕಾಸು ನಿರ್ಧಾರಗಳು ಒಳಗೊಂಡಂತೆ ಎಲ್ಲಾ ವ್ಯವಹಾರಗಳನ್ನು ಚೀನಾದಲ್ಲಿ ಕುಳಿತಿರುವ ವ್ಯಕ್ತಿಗಳು ತೆಗೆದುಕೊಳ್ಳುತ್ತಿರುವುದು ಕಂಡುಬಂದಿದೆ ಎಂದು ಇ.ಡಿ ತಿಳಿಸಿದೆ.

ಚೀನಾದ ನಿರ್ದೇಶಕ ಲಿಯು ಕ್ಯಾನ್ ಅವರ ಸೂಚನೆಯ ಮೇರೆಗೆ ಕಂಪನಿಯು ಜಾಹೀರಾತು ಮತ್ತು ಮಾರುಕಟ್ಟೆ ವೆಚ್ಚದ ಹೆಸರಿನಲ್ಲಿ ಚೀನಾ ಹಾಗೂ ಹಾಂಗ್ ಕಾಂಗ್‌ಗೆ ₹82.72 ಕೋಟಿ ಹಣವನ್ನು ಅಕ್ರಮವಾಗಿ ವರ್ಗಾಯಿಸಿದೆ ಎಂದು ಇ.ಡಿ ತಿಳಿಸಿದೆ.

‘ಕಂಪನಿಯು ಜಾಹೀರಾತಿಗೆ ಸಂಬಂಧಿಸಿದ ಯಾವುದೇ ಪುರಾವೆಯನ್ನು ನೀಡಿಲ್ಲ’ ಎಂದು ಇ.ಡಿ ಹೇಳಿದೆ.

ಚೀನಾದ ಕ್ಯಾನ್ ಸೂಚನೆ ಮೇರೆಗೆ ಹಣ ವರ್ಗಾವಣೆ ಮಾಡಿದ್ದಾಗಿ ಕಂಪನಿಯ ನಿರ್ದೇಶಕ ಮತ್ತು ಅಕೌಂಟ್ ಮ್ಯಾನೇಜರ್ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT