ಮಂಗಳವಾರ, ಜನವರಿ 18, 2022
27 °C

ಬೆಂಗಳೂರಿನಲ್ಲಿ ಜ.31 ರವರೆಗೆ ಶಾಲೆಗಳಿಗೆ ರಜೆ ವಿಸ್ತರಣೆ: ಸಚಿವ ಬಿ.ಸಿ. ನಾಗೇಶ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು ನಗರದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಶಾಲೆಗಳಿಗೆ ಇದೇ 31 ರವರೆಗೆ ರಜೆ ವಿಸ್ತರಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ.

ಈ ಸಂಬಂಧ ಆದೇಶ ಹೊರಡಿಸಲಾಗಿದೆ. ಈ ಮೊದಲು ಇದೇ 19 ರವರೆಗೆ ಮಾತ್ರ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು ಎಂದು ಅವರು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.

1 ರಿಂದ 9 ನೇ ತರಗತಿವರೆಗೆ ರಜೆ ಇದ್ದು, 10, 11 ಮತ್ತು 12 ತರಗತಿಗಳು ನಡೆಯುತ್ತಿವೆ. ಈ ತರಗತಿಗಳು ಇದೇ ರೀತಿ ಮುಂದುವರೆಯುತ್ತವೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನು ನೋಡಿಕೊಂಡು ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತದೆ. ಸದ್ಯಕ್ಕೆ ಗ್ರಾಮಾಂತರ ಪ್ರದೇಶಗಳಲ್ಲಿ ಸೋಂಕು ಪ್ರಮಾಣ ಕಡಿಮೆ ಇದೆ. ಬೆಂಗಳೂರು ಬಿಟ್ಟರೆ ಮೈಸೂರು ಮತ್ತು ಬೆಳಗಾವಿಯಲ್ಲಿ ಪ್ರಕರಣಗಳು ಹೆಚ್ಚು ಇವೆ. ಉಳಿದ ಕಡೆಗಳಲ್ಲಿ ಸೋಂಕಿನ ಸಂಖ್ಯೆ ಕಡಿಮೆ ಇವೆ ಎಂದರು.

ಇದನ್ನೂ ಓದಿ... ಕೆಪಿಸಿಸಿ ಪಾದಯಾತ್ರೆ: ಸರ್ಕಾರಕ್ಕೆ ಹೈಕೋರ್ಟ್ ಹಿಗ್ಗಾಮುಗ್ಗ ತರಾಟೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು