ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಲಂ ಮಕ್ಕಳಿಗೆ ಶಿಕ್ಷಣ: ಸರ್ಕಾರದಿಂದ ಅಗತ್ಯ ಸಹಕಾರದ ಚಿಂತನೆ; ಸಚಿವ ಸೋಮಶೇಖರ್

ಬೆಂಗಳೂರಿನ ಸ್ಲಂ ಮಕ್ಕಳಿಗೆ ಶಿಕ್ಷಣ ನೀಡುವ ಇಂಗಿತ ವ್ಯಕ್ತಪಡಿಸಿದ ನಿರ್ಮಲಾನಂದನಾಥ ಸ್ವಾಮೀಜಿ
Last Updated 23 ಡಿಸೆಂಬರ್ 2020, 6:08 IST
ಅಕ್ಷರ ಗಾತ್ರ

ಬೆಂಗಳೂರು: ‘ಸರ್ಕಾರದಿಂದ ಜಾಗ ಸಿಕ್ಕಿದರೆ ಬೆಂಗಳೂರಿನ ಸ್ಲಂಗಳಲ್ಲಿರುವ ಮಕ್ಕಳಿಗೆ ಆದಿಚುಂಚನಗಿರಿ ಮಠದಿಂದ ಉಚಿತ ಶಿಕ್ಷಣ ನೀಡುವುದಾಗಿ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದಾರೆ. ಸರ್ಕಾರ ಈ ಬಗ್ಗೆ ಕ್ರಮ ತೆಗೆದುಕೊಳ್ಳಲಿದೆ’ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.

ವಿಜಯನಗರದ ಆದಿಚುಂಚನಗಿರಿ ಮಠಕ್ಕೆ ಬುಧವಾರ ಭೇಟಿ ನೀಡಿ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ನಿರ್ಮಲಾನಂದನಾಥ ಸ್ವಾಮೀಜಿ ಬೆಂಗಳೂರಿನ ಪೀಠದಲ್ಲಿದ್ದಾಗಿನಿಂದಲೂ ಭೇಟಿ ಕೊಡುವ ಪರಿಪಾಠ ಹೊಂದಿದ್ದೇನೆ’ ಎಂದರು.

‘ಕೊರೊನಾ ಎರಡನೇ ಅಲೆ ಬಗ್ಗೆ ಭಯ ಪಡಬೇಕಾದ ಅಗತ್ಯವಿಲ್ಲ. ವ್ಯಕ್ತಿಗತ ಅಂತರ, ಮಾಸ್ಕ್, ಸ್ಯಾನಿಟೈಸರ್ ಬಳಕೆ ಮಾಡಬೇಕು. ಜೊತೆಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇನ್ನು ನಾಲ್ಕೈದು ತಿಂಗಳು ಹೆಚ್ಚಿನ ಜಾಗ್ರತೆ ವಹಿಸಬೇಕು’ ಎಂದು ಸಚಿವರು ಮನವಿ ಮಾಡಿದರು.

25ರಂದು ರೈತ ದಿನಾಚರಣೆ: ‘ಇದೇ 25ರಂದು ವಾಜಪೇಯಿ ಜನ್ಮದಿನ. ಅಂದು ರೈತರ ದಿನವಾಗಿ ಆಚರಿಸಲಾಗುವುದು. ಅಂದು ಎಲ್ಲ 30 ಜಿಲ್ಲೆಗಳಲ್ಲೂ ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ಏನೆಲ್ಲ ಉಪಯೋಗವಾಗಲಿದೆ ಎಂಬ ಬಗ್ಗೆ ತಿಳಿವಳಿಕೆ ಮೂಡಿಸಲಾಗುವುದು’ ಎಂದು ತಿಳಿಸಿದರು.

ಎಪಿಎಂಸಿ ಮುಚ್ಚಲ್ಲ: ‘ಎಪಿಎಂಸಿ ಮುಚ್ಚುವ ಪ್ರಶ್ನೆಯೇ ಇಲ್ಲ. ಯಾರಿಗೂ ಅದರಿಂದ ತೊಂದರೆಯಾಗದು. ಎಪಿಎಂಸಿಯನ್ನು ಇನ್ನಷ್ಟು ಮೇಲ್ದರ್ಜೆಗೇರಿಸುವ ತೀರ್ಮಾನವನ್ನು ತೆಗೆದುಕೊಂಡಿದ್ದೇವೆ. ಇದಕ್ಕಾಗಿ ನಬಾರ್ಡ್ ₹ 205 ಕೋಟಿ ಅನುದಾನ ನೀಡಿದೆ. ಅಲ್ಲದೆ, 35 ಪೈಸೆಗೆ ಇಳಿಸಿದ್ದ ಸೆಸ್ ಅನ್ನು ವರ್ತಕರು ಹಾಗೂ ವಿರೋಧ ಪಕ್ಷಗಳ ಆಗ್ರಹದ ಮೇರೆಗೆ ₹ 1 ಕ್ಕೆ ಏರಿಸಿ ಮುಖ್ಯಮಂತ್ರಿ ತೀರ್ಮಾನ ತೆಗೆದುಕೊಂಡಿದ್ದಾರೆ. ಹೀಗಾಗಿ ಆದಾಯದಲ್ಲಿ ನಷ್ಟ ಎಂಬ ಮಾತು ಇನ್ನು ಇಲ್ಲ’ ಎಂದೂ ಸೋಮಶೇಖರ್ ತಿಳಿಸಿದರು.

ಪ್ರಕರಣ ಕೋರ್ಟ್‌ನಲ್ಲಿದೆ: ಮೈಸೂರು ಜಿಲ್ಲಾಧಿಕಾರಿ ವರ್ಗಾವಣೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಹಾಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೊರೊನಾ ನಿಯಂತ್ರಣದಲ್ಲೂ ಪ್ರಮುಖ ಪಾತ್ರವಹಿಸಿದ್ದಾರೆ. ವರ್ಗಾವಣೆ ಪ್ರಕರಣ ಕೋರ್ಟ್‌ನಲ್ಲಿರುವುದರಿಂದ ನಾನು ಏನನ್ನೂ ಹೇಳುವುದಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT