ಶುಕ್ರವಾರ, ಅಕ್ಟೋಬರ್ 30, 2020
23 °C
ತಾಯ್ನುಡಿಯಲ್ಲೇ ಶಿಕ್ಷಣಕ್ಕೆ ಗೆಳೆಯರ ಬಳಗ ಒತ್ತಾಯ

ಇಂಗ್ಲಿಷ್‌ ಮಾಧ್ಯಮ ಶಾಲೆ: ಕನ್ನಡದ ಭವಿಷ್ಯಕ್ಕೆ ಮಾರಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ವಿರುದ್ಧವಾಗಿ ರಾಜ್ಯ ಸರ್ಕಾರವು 1,400 ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ಶಿಕ್ಷಣವನ್ನು ಪ್ರಾರಂಭಿಸಲು ಮುಂದಾಗಿದೆ. ಸರ್ಕಾರದ ಈ ನಡೆಯು ಕನ್ನಡದ ಭವಿಷ್ಯಕ್ಕೆ ಮಾರಕವಾಗಿದೆ’ ಎಂದು ಕನ್ನಡ ಗೆಳೆಯರ ಬಳಗ ಬೇಸರ ವ್ಯಕ್ತಪಡಿಸಿದೆ.

‘ಈ ಹಿಂದೆ ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರವು 1 ಸಾವಿರ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ಶಿಕ್ಷಣವನ್ನು ಪ್ರಾರಂಭಿಸಿ, ಕನ್ನಡದ ಹಿತಕ್ಕೆ ಧಕ್ಕೆಯನ್ನುಂಟು ಮಾಡಿತು. ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರವೂ ಈಗ ಅದೇ ಹಾದಿಯಲ್ಲಿ ಸಾಗುತ್ತಿದೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಮಾತೃಭಾಷೆಗೆ ಆದ್ಯತೆ ನೀಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಆದರೆ, ರಾಜ್ಯ ಸರ್ಕಾರಈ ನೀತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ‌’ ಎಂದು ಬಳಗದ ರಾ.ನಂ. ಚಂದ್ರಶೇಖರ ತಿಳಿಸಿದ್ದಾರೆ. 

‘ಕನ್ನಡದ ಬಗ್ಗೆ ಕಾಳಜಿಯಿದ್ದಲ್ಲಿ ಸರ್ಕಾರವು ಖಾಸಗಿ ಶಾಲೆಗಳಲ್ಲೂ ಒಂದನೇ ತರಗತಿಯಿಂದ ಇಂಗ್ಲಿಷ್‌ ಮಾಧ್ಯಮ ಶಿಕ್ಷಣವನ್ನು ರದ್ದುಗೊಳಿಸಲು ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು