ಯಲಹಂಕ: ‘ಮಕ್ಕಳ ಭವಿಷ್ಯ ಉಜ್ವಲವಾಗಬೇಕಾದರೆ ಶಿಕ್ಷಣವೇ ಪ್ರಮುಖ ಸೂತ್ರವಾಗಿದೆ. ಆದ್ದರಿಂದ ಎಲ್ಲ ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಮುಂದಾಗಬೇಕು’ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಬ್ಯಾಟರಾಯನಪುರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕೆಬಿಜಿ ಸ್ವಯಂಸೇವಕರ ಸಂಘದ ಆಶ್ರಯದಲ್ಲಿ ಸಹಕಾರನಗರದ ಗಣೇಶ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ನಮ್ಮೂರ ಹೆಮ್ಮೆ-2026 ಕಾರ್ಯಕ್ರಮದಲ್ಲಿ ಕೊಡಿಗೇಹಳ್ಳಿ ಹಾಗೂ ರಾಜೀವ್ಗಾಂಧಿನಗರ ವಾರ್ಡ್ ವ್ಯಾಪ್ತಿಯಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ 650ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ, ಸನ್ಮಾನಿಸಿ ಅವರು ಮಾತನಾಡಿದರು.

‘ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಉತ್ತೇಜಿಸುವುದರ ಜೊತೆಗೆ ಇತರ ಮಕ್ಕಳಿಗೂ ಸ್ಫೂರ್ತಿಯಾಗುವ ಉದ್ದೇಶದಿಂದ ನಮ್ಮೂರ ಹೆಮ್ಮೆ ಕಾರ್ಯಕ್ರಮವನ್ನು ಐದು ವರ್ಷಗಳಿಂದ ನಡೆಸಲಾಗುತ್ತಿದೆ. ಈ ವರ್ಷ ವಿವಿಧ ವಾರ್ಡ್ಗಳಲ್ಲಿ ಕನಿಷ್ಠ 4 ಸಾವಿರ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸುವ ಉದ್ದೇಶ ಇದೆ’ ಎಂದು ಮಾಹಿತಿ ನೀಡಿದರು.

ಸಾಮಾಜಿಕ ಕಾರ್ಯಕರ್ತೆ ಮೀನಾಕ್ಷಿ ಕೃಷ್ಣ ಬೈರೇಗೌಡ ಮಾತನಾಡಿ, ‘ನಮ್ಮ ಕ್ಷೇತ್ರದ ಹಲವು ವಿದ್ಯಾರ್ಥಿಗಳು ಇಂದು ದೇಶ-ವಿದೇಶಗಳಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಯುರೋಪ್, ಅಮೆರಿಕ, ಜರ್ಮನಿ, ಜಪಾನ್ ಹಾಗೂ ರಷ್ಯಾದಲ್ಲೂ ನಮ್ಮ ಮಕ್ಕಳು ಸಾಧನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಆಗಿದೆ’ ಎಂದರು.

ಇದೇ ಸಂದರ್ಭದಲ್ಲಿ ಸ್ಥಳೀಯ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಸಲುವಾಗಿ ಆಯೋಜಿಸಿದ್ದ ʼನಮ್ಮ ಯಂಗ್ ಸ್ಟಾರ್ʼ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ನೃತ್ಯ ಮತ್ತು ಗಾಯನಕ್ಕೆ ಸಂಬಂಧಿಸಿದಂತೆ 24 ತಂಡಗಳು ಭಾಗವಹಿಸಿ ಪ್ರದರ್ಶನ ನೀಡಿದವು. ಇದರಲ್ಲಿ ಅಂತಿಮವಾಗಿ 5 ತಂಡಗಳು ಆಯ್ಕೆಯಾಗಿ, ಮುಂದಿನ ಗ್ರ್ಯಾಂಡ್ ಫಿನಾಲೆ ಹಂತಕ್ಕೆ ಪ್ರವೇಶ ಪಡೆದವು.

ಕಾಂಗ್ರೆಸ್ ಮುಖಂಡರಾದ ಎನ್.ಎನ್. ಶ್ರೀನಿವಾಸಯ್ಯ, ಎಂ. ಜಯಗೋಪಾಲಗೌಡ, ವಿ. ಹರಿ, ವೆಂಕಟಸ್ವಾಮಿ, ಕೆ.ಆರ್. ರಾಜು, ಹನುಮಂತಿ, ಕೆ. ಮಂಜುನಾಥ್, ಕೆ. ದಿಲೀಪ್ಕುಮಾರ್, ಹರೀಶ್ ಜೋಡಿದಾರ್, ಶಾಂತಮ್ಮ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.