ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲಾ ಮಕ್ಕಳಿಗೆ ಲ್ಯಾ‍‍ಪ್‌ಟಾಪ್, ಟ್ಯಾಬ್ ವಿತರಣೆ

Last Updated 17 ಮಾರ್ಚ್ 2022, 22:29 IST
ಅಕ್ಷರ ಗಾತ್ರ

ಬೆಂಗಳೂರು: ಮಲ್ಲೇಶ್ವರ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಶಾಲೆಗಳಿಗೆ 60 ಲ್ಯಾಪ್‌ಟಾಪ್ ಮತ್ತು 150 ಟ್ಯಾಬ್‌ಗಳನ್ನು ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥನಾರಾಯಣ ವಿತರಿಸಿದರು.

ಡಾ.ಸಿ.ಎನ್. ಅಶ್ವತ್ಥನಾರಾಯಣ ಪ್ರತಿಷ್ಠಾನ, ಶಿಕ್ಷಣ ಫೌಂಡೇಷನ್ ಮತ್ತು ಇಂಡೋ-ಮಿಮ್ ಸಂಘಟನೆಗಳ ವತಿಯಿಂದ ಸುಬೇದಾರಪಾಳ್ಯದ ಶಾಲೆ ಆವರಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಲ್ಯಾಪ್‌ಟಾಪ್ ವಿತರಿಸಲಾಯಿತು.

ಬಳಿಕ ಮಾತನಾಡಿದ ಸಚಿವರು, ‘ಮಲ್ಲೇಶ್ವರ ಕ್ಷೇತ್ರದಲ್ಲಿರುವ ಸರ್ಕಾರಿ ಶಾಲೆಗಳನ್ನು ಇಡೀ ದೇಶಕ್ಕೇ ಮಾದರಿಯಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಡಿಜಿಟಲೀಕರಣ, ಪ್ರಯೋಗಾಲಯ, ಭಾಷಾ ಕಲಿಕೆ ಮತ್ತು ಗಣಿತ ಬೋಧನೆಗೆ ಹೆಚ್ಚಿನ ಒತ್ತು ಕೊಡಲಾಗಿದೆ’ ಎಂದರು.

ಸರ್ಕಾರಿ ಶಾಲೆಗಳಿಗೆ ಬರುವ ಎಲ್ಲರೂ ಬಡ ಕುಟುಂಬಗಳ ಮಕ್ಕಳೇ ಆಗಿರುತ್ತಾರೆ. ಇವರಿಗೂ ಗುಣಮಟ್ಟದ ಶಿಕ್ಷಣ ದೊರಕಿಸಬೇಕು ಎಂಬುದು ಸರ್ಕಾರದ ಸಂಕಲ್ಪ. ವಿಜ್ಞಾನ ಮತ್ತು ತಂತ್ರಜ್ಞಾನದ ಲಾಭವು ಈ ಮಕ್ಕಳಿಗೆ ಸಿಗುವಂತೆ ಮಾಡಲಾಗುವುದು ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT