ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಇಒ, ಜಿಲ್ಲಾಡಳಿತದ ಜೊತೆ ಶಿಕ್ಷಣ ಸಚಿವರ ವಿಡಿಯೊ ಸಂವಾದ ಇಂದು

Last Updated 23 ಡಿಸೆಂಬರ್ 2020, 5:51 IST
ಅಕ್ಷರ ಗಾತ್ರ

ಬೆಂಗಳೂರು: ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಜ. 1ರಿಂದ ಮತ್ತೆ ಆರಂಭಗೊಳ್ಳಲಿರುವ ಕಾರಣ, ಎಲ್ಲ ಜಿಲ್ಲೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (ಸಿಇಒ) ಮತ್ತು ಜಿಲ್ಲಾಡಳಿತದ ಜೊತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ಬುಧವಾರ ವಿಡಿಯೊ ಸಂವಾದ ನಡೆಸಲಿದ್ದಾರೆ.

ವಿಕಾಸಸೌಧದಲ್ಲಿ ಬೆಳಿಗ್ಗೆ 11 ಗಂಟೆಯಿಂದ 1 ಗಂಟೆವರೆಗೆ ನಡೆಯಲಿರುವ ಸಂವಾದದ ಸಂದರ್ಭದಲ್ಲಿ, ಶಾಲಾ–ಕಾಲೇಜುಗಳನ್ನು ಆರಂಭಿಸುವ ನಿಟ್ಟಿನಲ್ಲಿ ಮಾಡಿಕೊಂಡಿರುವ ಸಿದ್ಧತೆಗಳ ಪರಾಮರ್ಶೆ ನಡೆಸಲಿದ್ದಾರೆ. ಶಾಲೆ– ಕಾಲೇಜು ಆರಂಭಿಸುವ ಮೊದಲು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಈಗಾಗಲೇ ಪ್ರತ್ಯೇಕ ಎಸ್‌ಒಪಿ ಹೊರಡಿಸಲಾಗಿದೆ. ಅದನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ತೆಗೆದುಕೊಂಡ ಕ್ರಮಗಳ ಬಗ್ಗೆಯೂ ಸಂವಾದದ ವೇಳೆ ವಿಚಾರವಿನಿಮಯ ನಡೆಯಲಿದೆ.

ಹೆಚ್ಚಿನ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಶಾಲಾ ಕಾಲೇಜುಗಳನ್ನು ಆರಂಭಿಸಲು ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿದೆ. ವಿದೇಶಗಳಲ್ಲಿ ರೂಪಾಂತರಗೊಂಡು ಅತಿವೇಗದಲ್ಲಿ ಹರಡುತ್ತಿರುವ ಕೊರೊನಾ ವೈರಾಣುವಿನಿಂದ ಅಪಾಯ ಇಲ್ಲ. ಹೀಗಾಗಿ, ಸದ್ಯ ನಿರ್ಧರಿಸಿದಂತೆ ಶಾಲೆ, ಕಾಲೇಜು ಆರಂಭಿಸಲು ಯಾವುದೇ ಅಡ್ಡಿ ಇಲ್ಲ ಎಂದು ಈ ಸಮಿತಿ ಅಭಿಪ್ರಾಯಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT