ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರಮ, ಶಿಕ್ಷಣ ಜೊತೆಯಾಗಿ ಸಾಗಬೇಕು: ಭಾಸ್ಕರ್ ರಾವ್

Last Updated 30 ಜನವರಿ 2020, 19:10 IST
ಅಕ್ಷರ ಗಾತ್ರ

ಕೆಂಗೇರಿ: ‘ಸಂಘಟನೆಗೆ ಸೇರ್ಪಡೆಗೊಂಡರೆ ಸಾಲದು. ಸಂಘದ ಧ್ಯೇಯೋದ್ದೇಶಗಳ ಬಗ್ಗೆ ನಿಜವಾದ ಕಾಳಜಿ ಹೊಂದಿ ಕಾರ್ಯ ಪ್ರವೃತ್ತರಾಗಬೇಕು’ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಹೇಳಿದರು.

ಬೆಂಗಳೂರು ವಿಶ್ವವಿದ್ಯಾಲಯದ ಎನ್ನೆಸ್ಸೆಸ್‌ ಭವನದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಭಾವೈಕ್ಯತಾ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಈಶಾನ್ಯ ರಾಜ್ಯಗಳ ವಿದ್ಯಾರ್ಥಿಗಳನ್ನು ಸಂಘಟನೆಗೆ ಸೆಳೆಯುವ ಮೂಲಕ ರಾಷ್ಟ್ರೀಯ ಏಕತೆಗೆ ಮತ್ತಷ್ಟು ಬಲ ತುಂಬುವಂತೆ ಮನವಿ ಮಾಡಿದರು.

ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್‌.ವೇಣುಗೋಪಾಲ್‌, ‘ಎಲ್ಲಾ ಭಾಷೆಗಳಿಗೂ ಪ್ರಾಧಾನ್ಯತೆ ನೀಡುವ ಜೊತೆಗೆ ನಮ್ಮ ಭಾಷೆಯನ್ನು ಉಳಿಸಿ, ಬೆಳೆಸಿಕೊಂಡು ಬರುವುದೇ ನಿಜವಾದ ರಾಷ್ಟ್ರೀಯತೆ’ ಎಂದು ತಿಳಿಸಿದರು.

ಪ್ರೊ.ಸಿದ್ದಲಿಂಗಯ್ಯ ಮಾತನಾಡಿ, ‘ಸಮಾಜಕ್ಕೆ ಬಾಬಾ ಆಮ್ಟೆ, ಮದರ್ ತೆರೆಸಾ ಅವರಂತಹ ಸಾಮಾಜಿಕ ಹರಿಕಾರರು ಮಾದರಿಯಾಗಬೇಕಿದೆ. ರಾಜಕಾರಣಿಗಳು, ಬಂಡವಾಳಶಾಹಿಗಳು, ಚಲನಚಿತ್ರನಟರಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT