ಭಾನುವಾರ, ಜನವರಿ 26, 2020
18 °C
ಪ್ರಾಂಶುಪಾಲರ ಸಮಾವೇಶದಲ್ಲಿ ಅಭಿಪ್ರಾಯ ವ್ಯಕ್ತ

‘ಶಿಕ್ಷಣ ವ್ಯವಸ್ಥೆ ಬದಲಾಗಲಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಆಧುನಿಕ ಶಿಕ್ಷಣ ವ್ಯವಸ್ಥೆ ಮುಂದಿನ ಪೀಳಿಗೆಯ ಭವಿಷ್ಯವನ್ನು ಉಜ್ವಲಗೊಳಿಸುವಲ್ಲಿ ವಿಫಲವಾಗುತ್ತಿದೆ. ವ್ಯವಸ್ಥೆಯಲ್ಲಿ ಬದಲಾವಣೆ ತರುವ ಅಗತ್ಯ ಹೆಚ್ಚಾಗಿದೆ ಎಂಬ ಅಭಿಪ್ರಾಯ ಶನಿವಾರ ಇಲ್ಲಿ ನಡೆದ ಪ್ರಾಂಶುಪಾಲರ ಸಮಾವೇಶದಲ್ಲಿ ವ್ಯಕ್ತವಾಯಿತು.

ಏಟ್ರಿಯಾ ವಿಶ್ವವಿದ್ಯಾಲಯದ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣ ಮಾಡಿದ ಎಂಐಟಿಯ ನೂತನ ಎಂಜಿನಿಯರಿಂಗ್‌ ಶಿಕ್ಷಣ ಬದಲಾವಣೆ ಕಾರ್ಯಕ್ರಮದ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಬಾಬಿ ಮಿತ್ರ, ‘ವಿದ್ಯಾರ್ಥಿಗಳಲ್ಲಿ ಭವಿಷ್ಯದ ಬಗ್ಗೆ ದೂರದೃಷ್ಟಿ ಹೊಂದುವುದನ್ನು ಕಲಿಸಬೇಕು. ಸವಾಲುಗಳನ್ನು ಎದುರಿಸಲು ಮತ್ತು ಅವುಗಳನ್ನು ಯಾವುದೇ ಸಂದರ್ಭದಲ್ಲಾದರೂ ಅವಕಾಶಗಳಾಗಿ ಪರಿವರ್ತಿಸುವ ಸಾಮರ್ಥ್ಯ ಬೆಳೆಸಿಕೊಳ್ಳುವ ರೀತಿಯಲ್ಲಿ ಅವರನ್ನು ಬಲಿಷ್ಠಗೊಳಿಸಬೇಕು’ ಎಂದರು.

ಏಟ್ರಿಯಾ ವಿಶ್ವವಿದ್ಯಾಲಯದ ಸ್ಥಾಪಕ ಮತ್ತು ಟ್ರಸ್ಟಿ ಸುಂದರ್ ರಾಜು, ‘ವಿದ್ಯಾರ್ಥಿ ಕೇಂದ್ರಿತ ಕಲಿಕೆಯ ಅನುಭವವನ್ನು ವಿನ್ಯಾಸಗೊಳಿಸುವ ಕುರಿತು ಒಳನೋಟ ಇರುವ ಚರ್ಚೆಗಳು ನಡೆಯಬೇಕು’ ಎಂದರು.

ಡೆಕ್ಕನ್ ಇಂಟರ್‌ ನ್ಯಾಷನಲ್‌ ಶಾಲೆಯ ಪ್ರಾಂಶುಪಾಲರಾದ ಅನುರಾಧಾ ಆನೇಕಲ್, ‘ಇಂದು ವಿದ್ಯಾರ್ಥಿಗಳು ಮತ್ತು ಪೋಷಕರು ವೈವಿಧ್ಯಮಯ ವಿಷಯಗಳಿಗೆ ಒಡ್ಡಿಕೊಳ್ಳುತ್ತಾರೆ. ಶಿಕ್ಷಕರ ಪಾತ್ರವೂ ದೊಡ್ಡದಿದೆ’ ಎಂದರು.

ಸಮಾವೇಶದಲ್ಲಿ ದೇಶ, ವಿದೇಶಗಳ 50ಕ್ಕೂ ಅಧಿಕ ಪ್ರಾಂಶುಪಾಲರು ಪಾಲ್ಗೊಂಡಿದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು