ಸಾಮೂಹಿಕ ಪ್ರಾರ್ಥನೆ ಬಳಿಕ ಪುಟಾಣಿಗಳು ಪರಸ್ಪರ ಶುಭ ಕೋರಿದರು
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಮತ್ತು ಮಗ ಝೈದ್ ಖಾನ್ ಅವರು ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ತಮ್ಮ ಕೈಗಳಿಗೆ ಕಪ್ಪು ಪಟ್ಟಿ ಧರಿಸಿ ಭಾಗವಹಿಸಿದ್ದರು. ಪ್ರಜಾವಾಣಿ ಚಿತ್ರ / ಕಿಶೋರ್ ಕುಮಾರ್ ಬೋಳಾರ್
ಬೆಂಗಳೂರು– ಮೈಸೂರು ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಸೋಮವಾರ ಈದ್ ಉಲ್ ಫಿತ್ರ್ ಅಂಗವಾಗಿ ಮುಸ್ಲಿಂ ಸಮುದಾಯದವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು –ಪ್ರಜಾವಾಣಿ ಚಿತ್ರ/ರಂಜು ಪಿ.
‘ವಕ್ಫ್ ಕಾಯ್ದೆ ಬ್ರಿಟಿಷ್ ಕಾಲದ್ದು ’
‘ವಕ್ಫ್ ಕಾಯ್ದೆ ಈಗಿನದ್ದಲ್ಲ ಬ್ರಿಟಿಷ್ ಕಾಲದಿಂದಲೂ ಇದೆ. ಕಾಯ್ದೆಗೆ ತಿದ್ದುಪಡಿ ತರಬಾರದು ಎಂದು ದೇಶಾದಾದ್ಯಂತ ಮುಸ್ಲಿಂ ಸಮುದಾಯದವರು ಕೈಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತವಾಗಿ ಪ್ರತಿಭಟನೆ ಮಾಡಿದ್ದೇವೆ’ ಎಂದು ಸಚಿವ ಜಮೀರ್ ಅಹಮದ್ ಹೇಳಿದರು. 'ಪ್ರತಿ ವರ್ಷ ಪ‍್ರಾರ್ಥನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬರುತ್ತಿದ್ದರು. ಈ ಬಾರಿ ಅನಾರೋಗ್ಯದ ಕಾರಣದಿಂದ ಅವರು ಪ್ರಾರ್ಥನೆಯಲ್ಲಿ ಭಾಗಿಯಾಗಲು ಸಾಧ್ಯವಾಗಿಲ್ಲ. ಗುರುಗಳಾದ ಸಿದ್ದರಾಮಯ್ಯ ಅವರಿಗೆ ಆಯುಸ್ಸು ಆರೋಗ್ಯ ನೀಡಲಿ ಎಂದು ಪ್ರಾರ್ಥಿಸಲಾಗಿದೆ’ ಎಂದು ತಿಳಿಸಿದರು.