ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲಸಿದ್ದ ವಿದೇಶಿಯರ ಬಂಧನ

Last Updated 26 ಜುಲೈ 2022, 4:25 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಯರ ಪತ್ತೆ ಕಾರ್ಯಾಚರಣೆಯಲ್ಲಿ ಆಫ್ರಿಕಾ ಮೂಲದ ಒಬ್ಬನನ್ನು ಬಂಧಿಸಿ, ಏಳು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಸಂಪಿಗೆಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಒಬ್ಬನನ್ನು ಬಂಧಿಸಲಾಗಿದೆ. ಯಲಹಂಕ ಠಾಣಾ ವ್ಯಾಪ್ತಿಯಲ್ಲಿ ಏಳು ಮಂದಿಯನ್ನು ವಶಕ್ಕೆ ಪಡೆದು ವಲಸಿಗರ ಬಂಧನ ಕೇಂದ್ರದಲ್ಲಿ ಇರಿಸಲಾಗಿದೆ. ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT