ಬೆಂಗಳೂರು: ಸಚಿವ ರಾಮಲಿಂಗಾರೆಡ್ಡಿ ಅವರ ಕಾಳಜಿಯಿಂದ ವೇಗ ಪಡೆದುಕೊಂಡಿರುವ ಈಜಿಪುರ ಮೇಲ್ಸೇತುವೆ ಕಾಮಗಾರಿಗೆ ಭೂಸ್ವಾಧೀನ ತೊಡಕಾಗಿದೆ. ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಶುಕ್ರವಾರ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರ ಮುಗಿಸುವುದಾಗಿ ಭರವಸೆ ನೀಡಿದ್ದಾರೆ.

ಸೇಂಟ್ ಜಾನ್ಸ್ ಬಳಿ ರ್ಯಾಂಪ್ಗೆ ಅಗತ್ಯವಿರುವ ಜಾಗದ ಭೂಸ್ವಾಧೀನವಾಗಬೇಕಿದ್ದು, ಸಂಬಂಧಿಸಿದವರ ಜೊತೆ ಸಭೆ ನಡೆಸಿ ಕೂಡಲೇ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಬಳಿಕ ರ್ಯಾಂಪ್ ಕಾಮಗಾರಿಯನ್ನು ಕೈಗೆತ್ತಿಕೊಂಡು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ದಕ್ಷಿಣ ವಲಯದ ಡೇರಿ ವೃತ್ತದಿಂದ ಕಾಲ್ನಡಿಗೆ ಮೂಲಕ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದ ಮಹೇಶ್ವರ್ ರಾವ್, ಈಜೀಪುರ ಮೇಲ್ಸೇತುವೆ ಮೇಲ್ಭಾಗಕ್ಕೆ ತೆರಳಿ ಕಾಮಗಾರಿಯ ಪ್ರಗತಿಯನ್ನು ವೀಕ್ಷಿಸಿದರು. ಮೇಲ್ಸೇತುವೆ ಕಾಮಗಾರಿಗೆ ವೇಗ ನೀಡಿ ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಅನುವು ಮಾಡಿಕೊಡಲು ಗುತ್ತಿಗೆದಾರರಿಗೆ ಸೂಚನೆ ನೀಡಿದರು.

‘ಈಜಿಪುರ ಮೇಲ್ಸೇತುವೆಯ ಬಾಕಿ ಉಳಿದ ಕಾಮಗಾರಿಯನ್ನು ಬಿಎಸ್ಸಿಪಿಎಲ್ ಇನ್ಫ್ರಾಸ್ಟ್ರಕ್ಚರ್ ಗುತ್ತಿಗೆದಾರರು ನಡೆಸುತ್ತಿದ್ದಾರೆ. 762 ಸೆಗ್ಮೆಂಟ್ನಲ್ಲಿ 416 ಸೆಗ್ಮೆಂಟ್ ಕಾಸ್ಟಿಂಗ್ ಹಾಗೂ 291 ಸೆಗ್ಮೆಂಟ್ ಎರೆಕ್ಷನ್ ಮಾಡಲಾಗಿದೆ’ ಎಂದು ಗುಣನಿಯಂತ್ರಣ ವಿಭಾಗದ ಮುಖ್ಯ ಎಂಜಿನಿಯರ್ ಮಾಹಿತಿ ನೀಡಿದರು.

‘ಮೇಲ್ಸೇತುವೆಯ ಕೆಳಭಾಗದ ರಸ್ತೆಯನ್ನು ಸರಿಯಾಗಿ ನಿರ್ವಹಣೆ ಮಾಡಬೇಕು. ರಸ್ತೆಯ ಎರಡೂ ಬದಿಯ ಪಾದಚಾರಿ ಮಾರ್ಗಗಳ ನಿರ್ವಹಣೆ ಸರಿಯಾಗಿ ಇಲ್ಲ. ಕೂಡಲೇ ದುರಸ್ತಿ ಕಾರ್ಯವನ್ನು ಕೈಗೊಳ್ಳಬೇಕು. ಮಳೆ ನೀರು ಚರಂಡಿಗಳಿಗೆ ಸರಾಗವಾಗಿ ಹರಿದು ಹೋಗುವಂತೆ ವ್ಯವಸ್ಥೆ ಮಾಡಬೇಕು’ ಎಂದು ಮಹೇಶ್ವರ್ ರಾವ್ ಸೂಚಿಸಿದರು.

ಮಡಿವಾಳ ಬಸ್ ಪಿಕ್ ಅಪ್ ಪಾಯಿಂಟ್ ಬಳಿ, ರಸ್ತೆ ಬದಿ ತ್ಯಾಜ್ಯ ಬಿಸಾಡಿರುವುದನ್ನು ಕಂಡ ಮುಖ್ಯ ಆಯುಕ್ತರು, ‘ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುವ ಪೌರಕಾರ್ಮಿಕರು ಬೆಳಿಗ್ಗೆ 6 ಗಂಟೆಗೆ ಬಂದು ಸ್ವಚ್ಛತಾ ಕಾರ್ಯ ಮಾಡಬೇಕು. ಈ ಜಾಗದಲ್ಲಿ ಹೆಚ್ಚು ಬಸ್ಗಳು ನಿಲ್ಲಲಿದ್ದು, ಹೆಚ್ಚು ಮಂದಿ ಸಂಚರಿಸುತ್ತಾರೆ. ಆದ ಕಾರಣ ಸದಾ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು’ ಎಂದರು.

ಮಡಿವಾಳ ಕೆಳಸೇತುವೆಯ ಮೇಲ್ಭಾಗದಲ್ಲಿರುವ ಜಂಕ್ಷನ್ ಬಳಿ ಪಾದಚಾರಿ ಮಾರ್ಗಗಳು, ರಸ್ತೆ ಅಭಿವೃದ್ಧಿ ಸೇರಿದಂತೆ ಸಮಗ್ರ ಅಭಿವೃದ್ಧಿ ಮಾಡಬೇಕು. ಜಂಕ್ಷನ್ನಲ್ಲಿರುವ ಪೊಲೀಸ್ ಚೌಕಿಯಿಂದ ಪಾದಚಾರಿಗಳ ಓಡಾಟಕ್ಕೆ ಸಮಸ್ಯೆಯಾಗಲಿದ್ದು, ಅದನ್ನು ಸರಿಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

3.5 ಕಿ.ಮೀ ನಡಿಗೆ

ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಶುಕ್ರವಾರ ಬೆಳಿಗ್ಗೆ 3.5 ಕಿ.ಮೀ ನಡಿಗೆಯಲ್ಲಿ ಕ್ರಮಿಸಿ ರಸ್ತೆ ಪಾದಚಾರಿ ಮಾರ್ಗಗಳ ಸ್ವಚ್ಛತೆ ಕಾಪಾಡಲು ಅಧಿಕಾರಿಗಳಿಗೆ ಸೂಚಿಸಿದರು. ಡಬಲ್ ರಸ್ತೆಯ ಡೇರಿ ಸರ್ಕಲ್ ಬಳಿಯಿರುವ ಕ್ರೈಸ್ಟ್ ಕಾಲೇಜು ಬಳಿಯಿಂದ ಸೇಂಟ್ ಜಾನ್ಸ್ ಕಾಲೇಜು ಜಂಕ್ಷನ್ ಮಡಿವಾಳ ಕೆಳಸೇತುವೆ ಕೋರಮಂಗಲ 100 ಅಡಿ ರಸ್ತೆ ಕೇಂದ್ರೀಯ ಸದನ ಈಜಿಪುರ ಮೇಲ್ಸೇತುವೆ ರಸ್ತೆ ಸೋನಿ ಜಂಕ್ಷನ್ವರೆಗೆ ಸಂಚರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.