ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಜಿಪುರ ಮೇಲ್ಸೇತುವೆ ಕಾಮಗಾರಿ ಸ್ಥಗಿತ: ಬಿಬಿಎಂಪಿಗೆ ನೋಟಿಸ್

Last Updated 29 ಜುಲೈ 2021, 20:16 IST
ಅಕ್ಷರ ಗಾತ್ರ

ಬೆಂಗಳೂರು: ಈಜಿಪುರ ಮೇಲ್ಸೇತುವೆ ಕಾಮಗಾರಿ ಸ್ಥಗಿತ ಸಂಬಂಧ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ನೋಟಿಸ್ ನೀಡಲು ಹೈಕೋರ್ಟ್ ಆದೇಶಿಸಿದೆ.

ಕೋರಮಂಗಲ ನಿವಾಸಿ ಆದಿನಾರಾಯಣಶೆಟ್ಟಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿತು.

ಕೋರಮಂಗಲದ ಈಜಿಪುರ ಜಂಕ್ಷನ್‌ನಿಂದ ಕೇಂದ್ರೀಯ ಸದನ ನಡುವಿನ 2.5 ಕಿಲೋ ಮೀಟರ್ ಮೇಲ್ಸೇತುವೆ ಕಾಮಗಾರಿ ಒಪ್ಪಂದದ ಪ್ರಕಾರ 2019ರ ನವೆಂಬರ್ 4ರಂದೇ ಕಾಮಗಾರಿ ಪೂರ್ಣಗೊಳ್ಳಬೇಕಿತ್ತು. ಆದರೆ, ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಅರ್ಧಕ್ಕೆ ನಿಲ್ಲಿಸಲಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ಜೆನರ್ಮ್ ಯೋಜನೆಯಡಿ ಕೇಂದ್ರ ಸರ್ಕಾರದ ಶೇ 35ರಷ್ಟು, ರಾಜ್ಯ ಸರ್ಕಾರದ ಶೇ 15ರಷ್ಟು ಮತ್ತು ಬಿಬಿಎಂಪಿಯ ಶೇ 50ರಷ್ಟು ಅನುದಾನದಲ್ಲಿ ಈ ಕಾಮಗಾರಿ ಆರಂಭಿಸಲಾಗಿತ್ತು. ಒಟ್ಟಾರೆ ₹158 ಕೋಟಿ ವೆಚ್ಚದ ಕಾಮಗಾರಿಗೆ 2014ರಲ್ಲಿ ಟೆಂಡರ್ ಆಹ್ವಾನಿಸಲಾಗಿತ್ತು. 2017ರ ಮೇ 4ರಂದು ಸಿಂಪ್ಲೆಕ್ಸ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡರ್‌ಗೆ ಕಾಮಗಾರಿ ವಹಿಸಲಾಗಿತ್ತು.

ಕಾಮಗಾರಿಯನ್ನು ಒಂದು ತಿಂಗಳಲ್ಲಿ ಪೂರ್ಣಗೊಳಿಸುವ ಭರವಸೆ ಜತೆಗೆ ಆಕ್ಷೇಪಣಾ ಅರ್ಜಿ ಸಲ್ಲಿಸುವಂತೆ ಪೀಠ ತಿಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT