ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆ: ಮತದಾನ ಕೇಂದ್ರದಲ್ಲಿ ತುರ್ತುಚಿಕಿತ್ಸೆ

Published 16 ಏಪ್ರಿಲ್ 2024, 20:44 IST
Last Updated 16 ಏಪ್ರಿಲ್ 2024, 20:44 IST
ಅಕ್ಷರ ಗಾತ್ರ

ಬೆಂಗಳೂರು: ವಾತಾವರಣದಲ್ಲಿ ಅಧಿಕ ತಾಪಮಾನ ಇರುವುದರಿಂದ ಮತ ಕೇಂದ್ರಗಳಲ್ಲಿ ವೈದ್ಯಕೀಯ ಚಿಕಿತ್ಸೆಗೆ ಸಂಬಂಧಿಸಿದಂತೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ಸೂಚಿಸಿದ್ದಾರೆ.

ಈ ಬಗ್ಗೆ ಅವರು ಸುತ್ತೋಲೆ ಹೊರಡಿಸಿದ್ದಾರೆ. ಲೋಕಸಭೆ ಚುನಾವಣೆಯ ಮತದಾನವು ಏಪ್ರಿಲ್, ಮೇ ತಿಂಗಳಲ್ಲಿ ನಡೆಯಲಿದೆ. ಈ ಅವಧಿಯಲ್ಲಿ ಉಷ್ಣಾಂಶ ಹೆಚ್ಚಿರಲಿದೆ. ಶಾಖಾಘಾತದಿಂದ ಸಂಭವಿಸುವ ಸಮಸ್ಯೆಗಳ ನಿರ್ವಹಣೆಗೆ ವೈದ್ಯಕೀಯ ಕಿಟ್‌ ಸೇರಿ ವಿವಿಧ ಚಿಕಿತ್ಸಾ ಪರಿಕರಗಳನ್ನು ಜಿಲ್ಲಾ ಚುನಾವಣೆ ಅಧಿಕಾರಿಗಳಿಗೆ ಪೂರೈಕೆ ಮಾಡಬೇಕು ಎಂದು ಹೇಳಿದ್ದಾರೆ.

ಪ್ರತಿ ಮತ ಕೇಂದ್ರಕ್ಕೂ ಒಆರ್‌ಎಸ್ ದ್ರಾವಣವನ್ನು ಒದಗಿಸಬೇಕು. ತುರ್ತು ಸಂದರ್ಭದಲ್ಲಿ ಆಂಬುಲೆನ್ಸ್ ಸೇವೆ ಲಭ್ಯತೆ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಶಾಖಾಘಾತದಿಂದ ರಕ್ಷಿಸಿಕೊಳ್ಳಲು ಏನು ಮಾಡುಬೇಕು ಎಂಬುದರ ಬಗ್ಗೆ ಜಾಗೃತಿ ಮೂಡಿಸಲು ಕರಪತ್ರಗಳನ್ನು ಹಂಚಬೇಕು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT