ಬನ್ನೇರುಘಟ್ಟ ರಸ್ತೆಯ ಡೇರಿ ವೃತ್ತದಲ್ಲಿರುವ ಕಾರ್ಮಿಕ ಭವನದ ಆವರಣದಲ್ಲಿ ಮತದಾನ ನಡೆಯಲಿದ್ದು, ಅ.4ರಿಂದ ನಾಮಪತ್ರ ಸಲ್ಲಿಸಬಹುದು. 6ರಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದ್ದು, 7ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. 8ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಮತದಾನಕ್ಕೆ ಗುರುತಿನ ಚೀಟಿ ಕಡ್ಡಾಯವಾಗಿದ್ದು, ಕಚೇರಿ ಸಮಯದಲ್ಲಿ ಸಂಘದ ಮುಖ್ಯ ಪ್ರವರ್ತಕರಿಂದ ಗುರುತಿನ ಚೀಟಿ ಪಡೆಯಬಹುದು ಎಂದು ಚುನಾವಣಾಧಿಕಾರಿ ಆಂಜನಮೂರ್ತಿ ತಿಳಿಸಿದ್ದಾರೆ.