ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಾನುಕುಂಟೆ ಗ್ರಾ.ಪಂ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Published 6 ಆಗಸ್ಟ್ 2023, 17:53 IST
Last Updated 6 ಆಗಸ್ಟ್ 2023, 17:53 IST
ಅಕ್ಷರ ಗಾತ್ರ

ಯಲಹಂಕ: ರಾಜಾನುಕುಂಟೆ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಅಂಬಿಕಾ ರಾಜೇಂದ್ರಕುಮಾರ್ ಹಾಗೂ ಉಪಾಧ್ಯಕ್ಷರಾಗಿ ವೆಂಕಟೇಶ್ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನ ಸಾಮಾನ್ಯ(ಮಹಿಳೆ) ಮತ್ತು ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿತ್ತು.

ಒಟ್ಟು 27 ಸದಸ್ಯ ಬಲ ಹೊಂದಿರುವ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನಕ್ಕಾಗಿ ಅಂಬಿಕಾ ಮತ್ತು ಹೇಮಲತಾ ನಾಮಪತ್ರ ಸಲ್ಲಿಸಿದ್ದರು. ಅಂಬಿಕಾ 16 ಮತ್ತು ಹೇಮಲತಾ 11 ಮತಗಳನ್ನು ಪಡೆದರು.

ಉಪಾಧ್ಯಕ್ಷರ ಸ್ಥಾನಕ್ಕಾಗಿ ನಾಮಪತ್ರ ಸಲ್ಲಿಸಿದ್ದ ವೆಂಕಟೇಶ್ 14 ಮತ್ತು ರತ್ನಮ್ಮ 13 ಮತಗಳನ್ನು ಪಡೆದರು.

ಶಾಸಕ ಎಸ್.ಆರ್.ವಿಶ್ವನಾಥ್ ಮಾತನಾಡಿ, ರಾಜಾನುಕುಂಟೆ ಗ್ರಾಮ ಪಂಚಾಯಿತಿ ಪ್ರತಿಷ್ಠಿತ ಪಂಚಾಯಿತಿಯಾಗಿದೆ. ಮೊದಲಿನಿಂದ ಬಿಜೆಪಿಗೆ ಕೇಂದ್ರಸ್ಥಾನವಾಗಿದೆ. ಆದರೆ, ಕಳೆದ ಒಂದು ತಿಂಗಳ ಹಿಂದೆ, ಕೆಲವು ಸದಸ್ಯರು ಪಕ್ಷದಲ್ಲೇ ಇದ್ದುಕೊಂಡು ದ್ರೋಹಬಗೆದ ಕಾರಣ, ಪಂಚಾಯಿತಿ ಕಾಂಗ್ರೆಸ್ ಬೆಂಬಲಿತರ ತೆಕ್ಕೆಗೆ ಜಾರಿತ್ತು. ಅಂತಹವರನ್ನು ದೂರ ಇಡಲಾಗಿದೆ. ಮತ್ತೆ ಬಿಜೆಪಿ ಬೆಂಬಲಿತ ಸದಸ್ಯರ ವಶಕ್ಕೆ ಪಡೆಯಲು ಸಾಧ್ಯವಾಗಿದೆ ಎಂದರು.

ಕ್ಷೇತ್ರ ವ್ಯಾಪ್ತಿಯ ಬಹುತೇಕ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತರೇ ಅಧ್ಯಕ್ಷ, ಉಪಾಧ್ಯಕ್ಷರು ಆಯ್ಕೆಯಾಗಿದ್ದಾರೆ ಎಂದು ಹೇಳಿದರು.

ಬಿಜೆಪಿ ಮುಖಂಡರಾದ ದಿಬ್ಬೂರು ಜಯಣ್ಣ, ಎಸ್.ಎನ್.ರಾಜಣ್ಣ, ಎಸ್.ಜಿ. ನರಸಿಂಹಮೂರ್ತಿ, ಚೊಕ್ಕನಹಳ್ಳಿ ವೆಂಕಟೇಶ್, ಸತೀಶ್ ಕಡತನಮಲೆ, ಕೆ.ಆರ್.ತಿಮ್ಮೇಗೌಡ, ಅದ್ದೆ ಮಂಜುನಾಥ ರೆಡ್ಡಿ, ಎಂ.ಮೋಹನ್ ಕುಮಾರ್, ಪ್ರಶಾಂತ್ ರೆಡ್ಡಿ, ಡಿ.ಜಿ.ಅಪ್ಪಯಣ್ಣ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT