ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ: ಮನೆ ಮನೆಗೆ ಮುಖ್ಯ ಆಯುಕ್ತ

Last Updated 14 ಡಿಸೆಂಬರ್ 2022, 15:23 IST
ಅಕ್ಷರ ಗಾತ್ರ

ಬೆಂಗಳೂರು:ಮತದಾರ ಪಟ್ಟಿ ಪರಿಷ್ಕರಣೆಗಾಗಿ ಚುನಾವಣೆ ಆಯೋಗದ ನಿರ್ದೇಶನದಂತೆ ಅಧಿಕಾರಿಗಳೊಂದಿಗೆ ಜಿಲ್ಲಾ ಚುನಾವಣೆ ಅಧಿಕಾರಿಯಾಗಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್ ಮನೆ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಿದರು.

ಮತದಾರರ ಪಟ್ಟಿ ಪರಿಷ್ಕರಣೆಯ ಕಾರ್ಯಗಳು ನಡೆಯುತ್ತಿದ್ದು, ಕರಡು ಪಟ್ಟಿ ಪ್ರಕಟ, ಆಕ್ಷೇಪಣೆಗಳನ್ನು ಸಲ್ಲಿಸಿದ ನಂತರ ಬಿಎಲ್‌ಓ ಮತ್ತು ಬಿಎಲ್‌ಓ ಮೇಲ್ವಿಚಾರಕರುಮನೆ-ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿ ಶುದ್ಧೀಕರಿಸುವ ಕಾರ್ಯ ಮಾಡಿದ್ದಾರೆ. ಪರಿಷ್ಕರಣೆ ಮಾಡಿರುವುದನ್ನು ಜಿಲ್ಲಾ ಚುನಾವಣಾ ಅಧಿಕಾರಿ, ಹೆಚ್ಚುವರಿ ಜಿಲ್ಲಾ ಚುನಾವಣಾ ಅಧಿಕಾರಿಗಳು ಕೆಲ ಮನೆಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿರುವ ಬಗ್ಗೆ ’ಸೂಪರ್ ಚೆಕ್ಕಿಂಗ್’ ಮಾಡಲಾಗುತ್ತದೆ. ಅದರಂತೆ ಮುಖ್ಯ ಆಯುಕ್ತರು ಗೋವಿಂದರಾಜ ನಗರದ ಗಂಗಮ್ಮ ತಿಮ್ಮಯ್ಯ ಕಲ್ಯಾಣ ಮಂಟಪದ ಸುತ್ತಮುತ್ತಲಿನ ಮನೆಗಳು ಹಾಗೂ ವಿಜಯನಗರ ವ್ಯಾಪ್ತಿಯಲ್ಲಿ ಕೆಲ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

12 ನಮೂನೆಗಳ ಪರಿಶೀಲನೆ:

ಗೋವಿಂದರಾಜನಗರ ಹಾಗೂ ವಿಜಯನಗರ ವ್ಯಾಪ್ತಿಯಲ್ಲಿ ಮನೆ-ಮನೆಗೆ ಭೇಟಿ 12 ನಮೂನೆಗಳನ್ನು ‘ಸೂಪರ್ ಚೆಕ್ಕಿಂಗ್’ ಮಾಡಲಾಯಿತು. ನಮೂನೆಗಳಿಗೆ ಮನೆಯವರ ಹೆಸರು, ವಿಳಾಸ, ಸಹಿ ಪರಿಶೀಲನೆಯ ಜತೆಗೆ ಎರಡು ಕಡೆ ಹೆಸರಿದ್ದಲ್ಲಿ ಅದನ್ನು ಸಂಬಂಧಪಟ್ಟ ಅಧಿಕಾರಿ ಜೊತೆ ಮಾತನಾಡಿ ಒಂದು ಕಡೆ ಹೆಸರನ್ನು ತೆಗೆಸಲಾಗುವುದು ಎಂದರು.

ದಕ್ಷಿಣ ವಲಯ ಜಂಟಿ ಆಯುಕ್ತ ಜಗದೀಶ್ ನಾಯ್ಕ್, ಚುನಾವಣಾ ವಿಭಾಗದ ಸಹಾಯಕ ಆಯುಕ್ತ ಉಮೇಶ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT