ಶನಿವಾರ, ಸೆಪ್ಟೆಂಬರ್ 25, 2021
26 °C

ಮತದಾರರ ಪಟ್ಟಿ ಪರಿಷ್ಕರಣೆ ಆ 9ರಿಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ಇದೇ 9ರಿಂದ (ಸೋಮವಾರ) ಆರಂಭವಾಗಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತ ತಿಳಿಸಿದ್ದಾರೆ.

ಇದೇ 9ರಿಂದ ಅ. 31ರವರೆಗೆ ಮತದಾರರ ಪಟ್ಟಿ ಪರಿಷ್ಕರಣೆ ನಡೆಯಲಿದೆ. ಹೆಸರು ಮರುಕಳಿಸಿರುವುದು, ಹೆಸರಿನ ಅಕ್ಷರಗಳು ಬದಲಾಗಿರುವುದನ್ನು ಮಾರ್ಪಡಿಸಲು ಅವಕಾಶ ಕಲ್ಪಿಸಲಾಗಿದೆ. ಮತಗಟ್ಟೆ ಹಂತದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ತೆರಳಿ ಮತದಾರರ ಪಟ್ಟಿಯನ್ನು ಪರಿಶೀಲಿಸಿ ಲೋಪಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಿದ್ದಾರೆ. ಮತಗಟ್ಟೆಗಳನ್ನು ಮರುನಿಗದಿಗೊಳಿಸಲಿದ್ದಾರೆ.

ಮತದಾರರ ಕರಡು ಪಟ್ಟಿಯನ್ನು ಬಿಬಿಎಂಪಿ ನ.1ರಂದು ಪ್ರಕಟಿಸಲಿದೆ. ಮತದಾರರು ಆಕ್ಷೇಪಣೆಗಳನ್ನು ಸಲ್ಲಿಸಲು ನ. 30ರವರೆಗೆ ಕಾಲಾವಕಾಶ ನೀಡಲಾಗುತ್ತದೆ. ಆಕ್ಷೇಪಣೆಗಳನ್ನು ಪರಿಗಣಿಸಿ ಡಿ. 20ರ ಒಳಗೆ ಜಿಲ್ಲಾ ಚುನಾವಣಾಧಿಕಾರಿ ಸೂಕ್ತ ಮಾರ್ಪಾಡು ಮಾಡಲಿದ್ದಾರೆ.

‘ಮತದಾರರ ಅಂತಿಮ ಪಟ್ಟಿಯನ್ನು 2022ರ ಜ. 5ರಂದು ಪ್ರಕಟಿಸಲಾಗುತ್ತದೆ’ ಎಂದು ಮುಖ್ಯ ಆಯುಕ್ತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು