ಮಂಗಳವಾರ, ಮೇ 17, 2022
27 °C

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಲೆಕ್ಟ್ರಿಕ್ ಬಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1 ಮತ್ತು ಟರ್ಮಿನಲ್ 2ರ ನಡುವೆ ಪ್ರಯಾಣಿಕರ ಓಡಾಟಕ್ಕೆ ಎಲೆಕ್ಟ್ರಿಕ್ ಬಸ್‌ಗಳನ್ನು ಕಾರ್ಯಾಚರಣೆಗೆ ಇಳಿಸಲು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ(ಬಿಐಎಎಲ್) ನಿರ್ಧರಿಸಿದೆ.

ಖಾಸಗಿ ಸಹಭಾಗಿತ್ವದಲ್ಲಿ ಬಸ್‌ಗಳನ್ನು ಪಡೆದುಕೊಳ್ಳಲು ಮುಂದಾಗಿದ್ದು, ಆಸಕ್ತ ಕಂಪನಿಗಳಿಂದ ಪ್ರಸ್ತಾವನೆಗಳನ್ನು ಆಹ್ವಾನಿಸಿದೆ. ಏ.25ರೊಳಗೆ ಪ್ರಸ್ತಾವನೆ ಸಲ್ಲಿಸಲು ಕಂಪನಿಗಳಿಗೆ ಅವಕಾಶ ಕಲ್ಪಿಸಿದೆ.

‘ನಿರಂತರವಾಗಿ ಹೆಚ್ಚಾಗುತ್ತಿರುವ ವಾಯು ಸಾರಿಗೆಯ ಅಗತ್ಯಕ್ಕೆ ತಕ್ಕಂತೆ ಪರಿಸರ ಸ್ನೇಹಿ ಎಲೆಕ್ಟ್ರಿಕ್ ಬಸ್‌ಗಳನ್ನು ಕಾರ್ಯಾಚರಣೆಗೆ ಇಳಿಸುವ  ಉದ್ದೇಶವಿದೆ’ ಎಂದು ಬಿಐಎಎಲ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯರಾಜ್ ಷಣ್ಮುಗಂ ತಿಳಿಸಿದರು.

‘ವಿಮಾನ ನಿಲ್ದಾಣದ ಕಾರ್ಯಾಚರಣೆಯಿಂದ ಪರಿಸರದಲ್ಲಿ ಇಂಗಾಲದ ಪ್ರಮಾಣ ಹೆಚ್ಚಾಗದಂತೆ ತಡೆಯಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ನವೀಕರಿಸಬಹುದಾದ ಇಂಧನ ಬಳಕೆ, ಸೌರಶಕ್ತಿ ಮೇಲ್ಛಾವಣಿಗಳ ಅಳವಡಿಕೆ ಮತ್ತು ಪವನ ವಿದ್ಯುತ್ ಖರೀದಿ ಸಂಬಂಧ ಒಪ್ಪಂದಗಳನ್ನು 2020ರ ಡಿಸೆಂಬರ್‌ನಲ್ಲೇ ಮಾಡಿಕೊಳ್ಳಲಾಗಿದೆ. ಇಂಧನ ಉಳಿತಾಯ ಕಾರ್ಯಕ್ರಮದ ಅಡಿಯಲ್ಲಿ 9 ಸಾವಿರ ಮನೆಗಳಿಗೆ ಪೂರೈಕೆ ಮಾಡುವಷ್ಟು ಇಂಧನ ಉಳಿತಾಯ ಮಾಡಲಾಗುತ್ತಿದೆ’ ಎಂದು ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು