ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್ ದರ ಏರಿಕೆ | ದುಪ್ಪಟ್ಟು ಶುಲ್ಕ ವಿಧಿಸಲಾಗಿದೆ: ಡಿ.ಕೆ. ಶಿವಕುಮಾರ್

Last Updated 13 ಮೇ 2020, 9:41 IST
ಅಕ್ಷರ ಗಾತ್ರ

ಬೆಂಗಳೂರು: ವಿದ್ಯುತ್ ದರ ಏರಿಕೆಗೆ ಸಂಬಂಧಿಸಿದಂತೆ ಎಲ್ಲ ಕಡೆಯಿಂದಲೂ ಬಿಲ್‌ಗಳನ್ನು ತರಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದೇನೆ. ಗ್ರಾಹಕರಿಗೆ ದುಪ್ಪಟ್ಟು ಶುಲ್ಕ ವಿಧಿಸಲಾಗಿದೆ. ಬಡ್ಡಿ ಲೆಕ್ಕಾಚಾರದಲ್ಲಿಯೂ ದೊಡ್ಡ ವ್ಯತ್ಯಾಸ ಕಂಡುಬಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.

ಈ ಸಂಬಂಧ ಮಾತನಾಡಿರುವ ಅವರು, ‘ಬಿಲ್‌ಗಳನ್ನು ಪರಿಶೀಲಿಸುತ್ತಿದ್ದೇನೆ.ವಿದ್ಯುತ್‌ ದರ ದುಪ್ಪಟ್ಟಾಗಿದೆ. ಇದಕ್ಕೆ ಸಂಬಂಧಿಸಿದಂತೆ ಬೆಸ್ಕಾಂ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಬಡ್ಡಿ ಲೆಕ್ಕಾಚಾರದಲ್ಲಿ ಬಹಳ ವ್ಯತ್ಯಾಸವಾಗಿದೆ. ನಾನೂ ಇಂಧನ ಸಚಿವನಾಗಿದ್ದೆ. ಹೀಗಾಗಿ ಮತ್ತೊಮ್ಮೆ ಪರಿಶೀಲನೆ ನಡೆಸುತ್ತೇನೆ. ಸರ್ಕಾರ ನೀಡಿದ ಭರವಸೆಗೆ ತದ್ವಿರುದ್ಧವಾಗಿ ಬೆಸ್ಕಾಂ ನಡೆದುಕೊಳ್ಳುತ್ತಿದೆ. ಈ ವಿಚಾರವಾಗಿಸಂಪೂರ್ಣ ವಿವರ ನೀಡಲಿದ್ದೇನೆ’ ಎಂದು ಹೇಳಿದ್ದಾರೆ.

ಲಾಕ್‌ಡೌನ್‌ ಅವಧಿಯಲ್ಲಿ ವಿದ್ಯುತ್‌ ಬಳಸದಿದ್ದರೂ ಬೆಸ್ಕಾಂ,ಬಿಲ್‌ ವಸೂಲಿಗೆ ಮುಂದಾಗಿದೆ ಎಂದು ಪ್ರಜಾವಾಣಿಯಲ್ಲಿ ಕಳೆದವಾರ ವರದಿ ಪ್ರಕಟವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT