ಸೋಮವಾರ, ನವೆಂಬರ್ 30, 2020
20 °C

ವಿದ್ಯುತ್ ತಗುಲಿ ಕಾರ್ಮಿಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬ್ಯಾಡರಹಳ್ಳಿ ಠಾಣೆ ವ್ಯಾಪ್ತಿಯಲ್ಲಿರುವ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಗುಲಿ ಕಾರ್ಮಿಕ ವಿಷ್ಣುಕುಮಾರ್ (25) ಎಂಬುವರು ಮೃತಪಟ್ಟಿದ್ದು, ಮತ್ತೊಬ್ಬ ಕಾರ್ಮಿಕ ರಾಜನ್ ಎಂಬುವರು ಗಾಯಗೊಂಡಿದ್ದಾರೆ.

‘ಅಂದ್ರಹಳ್ಳಿ ಬಳಿಯ ವಾಲ್ಮೀಕಿ ನಗರದಲ್ಲಿ ಸೋಮವಾರ ಬೆಳಿಗ್ಗೆ ಈ ಅವಘಡ ಸಂಭವಿಸಿದೆ. ನಿರ್ಲಕ್ಷ್ಯ ವಹಿಸಿದ್ದ ಆರೋಪದಡಿ ಕಟ್ಟಡ ಮಾಲೀಕ ಶ್ರೀವರ್ಧನ್ ಎಂಬುವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ಹೇಳಿದರು.

‘ಬಿಹಾರದ ವಿಷ್ಣುಕುಮಾರ್ ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದರು. ಎಲೆಕ್ಟ್ರಿಕಲ್ ಗುತ್ತಿಗೆದಾರ ಶ್ರೀವರ್ಧನ್ ಅವರ ಬಳಿ ವೆಲ್ಡಿಂಗ್ ಕೆಲಸಕ್ಕೆ ಸೇರಿದ್ದರು.‘

‘ಶ್ರೀವರ್ಧನ್ ಅವರೇ ನಾಲ್ಕು ಮಹಡಿಯ ಮನೆ ನಿರ್ಮಿಸುತ್ತಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ವಿಷ್ಣುಕುಮಾರ್, ಮಹಡಿಯ ಸರಳುಗಳನ್ನು ಜೋಡಿಸುತ್ತಿದ್ದರು. ಒಂದು ಸರಳು ಕಟ್ಟಡದ ಪಕ್ಕದಲ್ಲೇ ಹಾದುಹೋಗಿರುವ ವಿದ್ಯುತ್ ತಂತಿಗೆ ತಗುಲಿತ್ತು. ಕ್ಷಣಮಾತ್ರದಲ್ಲಿ ಸರಳುಗಳಲ್ಲಿ ವಿದ್ಯುತ್ ಪ್ರವಹಿಸಿ ವಿಷ್ಣಕುಮಾರ್ ಅವರಿಗೆ ತಗುಲಿತ್ತು. ಸ್ಥಳದಲ್ಲೇ ಅವರು ಮೃತಪಟ್ಟರು. ಈ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳಿಕೆ ನೀಡಿದ್ದಾರೆ’ ಎಂದೂ ಪೊಲೀಸರು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.