ಬುಧವಾರ, ಫೆಬ್ರವರಿ 26, 2020
19 °C

ಆನೆ ದಾಳಿ: ಗಾಯಾಳು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕನಕಪುರ: ಕೆಂಚೇಗೌಡನದೊಡ್ಡಿಯಲ್ಲಿ ಕಾಡಾನೆ ತುಳಿತದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಿಂಗರಾಜು (45) ಗುರುವಾರ ಮೃತಪಟ್ಟಿದ್ದಾರೆ.

ಒಂದು ವಾರದ ಹಿಂದೆ ಜಮೀನಿನಲ್ಲಿ ದನ ಮೇಯಿಸುತ್ತಿದ್ದಾಗ ಒಂಟಿ ಸಲಗ ದಾಳಿ ಮಾಡಿತ್ತು. ಅವರ ಚೀರಾಟ ಕೇಳಿ ಗ್ರಾಮಸ್ಥರು ಸಹಾಯಕ್ಕೆ ಧಾವಿಸಿ ರಕ್ಷಣೆ ಮಾಡಿದ್ದರು. ಆನೆ ದಂತದಿಂದ ತಿವಿದು ಗಾಯಗೊಳಿಸಿತ್ತು. ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಸಾವನ್ನಪ್ಪಿದ್ದಾರೆ. ಮೃತರಿಗೆ ಪತ್ನಿ, ಒಬ್ಬ ಪುತ್ರ, ಪುತ್ರಿ ಇದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು