ಭಾನುವಾರ, ಜುಲೈ 3, 2022
27 °C

ಬೆಂಗಳೂರು: 29 ಕೆ.ಜಿ ತೂಕದ ದಂತಗಳು ಜಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆನೆ ದಂತಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಹಾಸನ ತಾಲ್ಲೂಕಿನ ವೀರಾಪುರದ ಚಂದ್ರೇಗೌಡ (46), ಹಾವೇರಿಯ ಶಿಗ್ಗಾವಿ ತಾಲ್ಲೂಕಿನ ಹುಲಗೂರಿನ ಸೋಮಲಿಂಗಪ್ಪ ಕೊಡದ್ (41) ಹಾಗೂ ಪ್ರವೀಣ್ ಗುಳೇದ್ (24) ಬಂಧಿತರು. ಅವರಿಂದ 29 ಕೆ.ಜಿ ತೂಕದ ಎರಡು ದಂತಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಟಾಟಾ ಇಂಡಿಕಾ ಕಾರಿನಲ್ಲಿ ದಂತ ಇಟ್ಟುಕೊಂಡಿದ್ದ ಆರೋಪಿಗಳು, ಬನಶಂಕರಿ ಮೂರನೇ ಹಂತದಲ್ಲಿ ಸಂಚರಿಸುತ್ತಿದ್ದರು. ಮಾಹಿತಿ ಬರುತ್ತಿದ್ದಂತೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಯಿತು’ ಎಂದೂ ತಿಳಿಸಿದರು.

‘ವ್ಯಕ್ತಿಯೊಬ್ಬರಿಂದ ತಂದಿದ್ದ ದಂತಗಳನ್ನು ಆರೋಪಿಗಳು ನಗರದ ನಿವಾಸಿಯೊಬ್ಬರಿಗೆ ನೀಡಲು ಹೊರಟಿದ್ದರು. ನಿವಾಸಿ ಯಾರು ಎಂಬುದು ಗೊತ್ತಾಗಿಲ್ಲ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದೂ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು