ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಕರಿ ಉತ್ಪನ್ನಗಳ ಘಟಕ ಸ್ಥಾಪನೆಗೆ ಸಹಾಯಧನ

Last Updated 16 ಜೂನ್ 2021, 19:30 IST
ಅಕ್ಷರ ಗಾತ್ರ

ಬೆಂಗಳೂರು: ಬೇಕರಿ ಉತ್ಪನ್ನಗಳಿಗೆ ಸಂಬಂಧಿಸಿದಂತೆ ಘಟಕಗಳು, ಬ್ರಾಂಡಿಂಗ್, ಲೇಬಲಿಂಗ್, ಮಾರುಕಟ್ಟೆ ಬೆಂಬಲ ಮತ್ತು ರಫ್ತಿಗೆ ಪ್ರೋತ್ಸಾಹ ನೀಡಲು ಆಸಕ್ತ ಸಂಸ್ಥೆಗಳಿಗೆ ಹಾಗೂ ಸಣ್ಣ ಉದ್ದಿಮೆದಾರರಿಗೆ ಸಹಾಯಧನ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರಧಾನಮಂತ್ರಿಗಳ ಅತಿ ಸಣ್ಣ ಆಹಾರ ಸಂಸ್ಕರಣಾ ಉದ್ದಿಮೆಗಳ ಯೋಜನೆ ಅಂಗವಾಗಿ ‘ಒಂದು ಜಿಲ್ಲೆ– ಒಂದು ಉತ್ಪನ್ನ’ ಆಧಾರದ ಮೇಲೆ ಬೆಂಗಳೂರು ನಗರ ಜಿಲ್ಲೆಗೆ ‘ಬೇಕರಿ ಉತ್ಪನ್ನಗಳ ತಯಾರಿಕೆ ಯೋಜನೆ’ ಜಾರಿಗೆ ತರಲಾಗಿದೆ. ಈ ಯೋಜನೆ ಅಡಿಯಲ್ಲಿ ಹೊಸದಾಗಿ ಉದ್ದಿಮೆ ಸ್ಥಾಪಿಸಲು ಹಾಗೂ ಹಾಲಿ ಕಾರ್ಯನಿರ್ವಹಿಸುತ್ತಿರುವ ಸಂಸ್ಕರಣಾ ಘಟಕಗಳನ್ನು ಉನ್ನತೀಕರಿಸಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತರು ಬೆಂಗಳೂರು ನಗರ ಮತ್ತು ನಗರ ಜಿಲ್ಲೆ ನಿವಾಸಿಗಳಾಗಿದ್ದು, ಉದ್ಯಮದ ಮಾಲೀಕತ್ವ ಹೊಂದಿರಬೇಕು.

ಅರ್ಜಿದಾರರು 8 ನೇ ತರಗತಿ ಶೈಕ್ಷಣಿಕ ಅರ್ಹತೆ ಹೊಂದಿದ್ದು, ಕನಿಷ್ಠ 18 ವರ್ಷ ಪೂರೈಸಿರಬೇಕು. ಸಂಸ್ಥೆ ಅಸಂಘಟಿತವಾಗಿದ್ದು, 10ಕ್ಕಿಂತ ಕಡಿಮೆ ಉದ್ಯೋಗಿಗಳನ್ನು ಹೊಂದಿರಬೇಕು. ಯೋಜನಾ ವೆಚ್ಚ ಹಾಲಿ ವೆಚ್ಚಕ್ಕಿಂತ ಕಡಿಮೆ ಇರಬಾರದು. ಉತ್ಪನ್ನ ನಿರ್ವಹಣೆಯಲ್ಲಿ ಕನಿಷ್ಠ 3 ವರ್ಷಗಳ ಜ್ಞಾನ ಮತ್ತು ಅನುಭವ ಹೊಂದಿರಬೇಕು ಎಂದು ಪ್ರಕಟಣೆ ತಿಳಿಸಿದೆ.

ಮಾಹಿತಿಗೆ, 9448752379, 8277929923.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT