ಬೆಂಗಳೂರು: ನಿರುದ್ಯೊಗಿ ಯುವಕ, ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಅನುಕೂಲ ಆಗುವಂತೆ ಎಚ್‌ಎಸ್‌ಆರ್ ಲೇಔಟ್ ಮೊದಲ ಹಂತದಲ್ಲಿ ಮಾ.13ರಂದು(ಶನಿವಾರ) ಉದ್ಯೋಗ ಮೇಳ ನಡೆಯಲಿದೆ.

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ರಾಷ್ಟ್ರೀಯ ವೃತ್ತಿ ಸೇವಾ ಯೋಜನೆ(ಎನ್‌ಸಿಎಸ್‌ಪಿ), ಉಪಪ್ರಾದೇಶಿಕ ಉದ್ಯೋಗ ವಿನಿಯಮ ಕಚೇರಿ ಸಹಯೋಗದಲ್ಲಿ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆ ತನಕ ಎಚ್‌ಎಸ್‌ಆರ್ ಲೇಔಟ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೇಳ ನಡೆಯಲಿದೆ.

ಖಾಸಗಿ ವಲಯದ ಹಲವು ಹೆಸರಾಂತ ಕಂಪನಿಗಳು ಭಾಗವಹಿಸಲಿದ್ದು, ಅಗತ್ಯ ಇರುವ ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳಿಗೆ ನೇರವಾಗಿ ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ ಹೊಂದಿದವರು ಸ್ವವಿವರಗಳೊಂದಿಗೆ ಹಾಜರಾಗುವಂತೆ ಆಯೋಜಕರು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.